ಟಿ.ಜಿ.ಶಿವಶಂಕರೇ ಗೌಡ ಸಹಿತ ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ

0


ಬೆಂಗಳೂರು:ಈ ಹಿಂದೆ ಪುತ್ತೂರು ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿದ್ದ ಟಿ.ಜಿ.ಶಿವಶಂಕರೇ ಗೌಡರ ಸಹಿತ ರಾಜ್ಯ ಹೈಕೋರ್ಟ್ಗೆ ಹೊಸದಾಗಿ ನೇಮಕಗೊಂಡಿರುವ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಆ.16ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ, ನ್ಯಾಯಮೂರ್ತಿಗಳಾಗಿ ಪದೋನ್ನತಿ ಪಡೆದಿರುವ ತಲಕಾಡು ಗಿರಿಗೌಡ ಶಿವಶಂಕರೇ ಗೌಡ, ಅನಿಲ್ ಭೀಮಸೇನ ಕಟ್ಟಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ ಮತ್ತು ಉಮೇಶ ಮಂಜುನಾಥ ಭಟ್ಟ ಅಡಿಗ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.ಈ ಐವರ ಪದೋನ್ನತಿಯಿಂದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ,ಶಾಸಕರು, ಹೈಕೋರ್ಟ್ ನ್ಯಾಯಮೂರ್ತಿಗಳು, ವಕೀಲರು ಉಪಸ್ಥಿತರಿದ್ದರು.ಟಿ.ಜಿ.ಶಿವಶಂಕರೇ ಗೌಡರು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಥಮ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here