ತಿಂಗಳಾಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಮನೆಗೆ ಬೆಂಕಿ : ಅಪಾರ ನಷ್ಟ

0

ಪುತ್ತೂರು: ವಿದ್ಯುತ್  ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹತ್ತಿಕೊಂಡು ಅಪಾರ ನಷ್ಟ ಸಂಭವಿಸಿದ ಘಟನೆ ತಿಂಗಳಾಡಿ ಸಮೀಪದ ಕನ್ನಡಮೂಲೆ ಎಂಬಲ್ಲಿ ಆ.18 ರಂದು ರಾತ್ರಿ ನಡೆದಿದೆ. ಕನ್ನಡಮೂಲೆ ಸಂಶುದ್ದೀನ್ ಎಂಬವರ ಮನೆಯಲ್ಲಿ ಇನ್‌ವರ್ಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದೆ. ಒಂದು ಕೋಣೆ ಸಂಪೂರ್ಣ ಸುಟ್ಟು ಹೋಗಿದ್ದು ವಿದ್ಯುತ್ ಉಪಕರಣಗಳು ಸೇರಿದಂತೆ ಬೆಲೆ ಬಾಳುವ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದು ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆದಂಬಾಡಿ ಗ್ರಾಪಂ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿ, ಮುಂಡೂರು ಗ್ರಾಪಂ ಸದಸ್ಯ ಅಲಿ ಹಾಗೂ ಸ್ಥಳೀಯ ಹಲವು ಮಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು, ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕರಿಸಿದ್ದರು.

LEAVE A REPLY

Please enter your comment!
Please enter your name here