ಆ.24 : ಪುತ್ತೂರು ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

0

ಪುತ್ತೂರು : ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಆ.22ರಿಂದ ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದು ಆ.24ರಂದು ಬೆಳಿಗ್ಗೆ11 ರಿಂದ ಮಧ್ಯಾಹ್ನ 1 ರವರೆಗೆ ಪುತ್ತೂರು ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ 0824-2950997, 9243456629, ಉಪಾಧೀಕ್ಷಕರ-1 ಕಚೇರಿ 0824-2453420, 9448635348, ಉಪಾಧೀಕ್ಷಕರ-2 ಕಚೇರಿ 0824-2453420, 7019967061, ನಿರೀಕ್ಷಕರ ಕಚೇರಿ 0824-2427237, 9448461816ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here