ವಿವೇಕಾನಂದ ಶಿಶು ಮಂದಿರದಲ್ಲಿ ಸಂಭ್ರಮಿಸಿದ 24ನೇ ವರ್ಷದ `ಶ್ರೀಕೃಷ್ಣಲೋಕ’ ಸಂಭ್ರಮ

0

*  ಬಾಲಕೃಷ್ಣನ ತೊಟ್ಟಿಲ ಸಂಭ್ರಮ
* ಮೇಲೈಸಿದ ರಾಧೆ-ಕೃಷ್ಣ-ಯಶೋಧೆಯರ ಭವ್ಯ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿಯ ವತಿಯಿಂದ ಹಿಂದೂ ಸನಾತನ ಸಂಸ್ಕೃತಿಯ ಪ್ರತಿರೂಪವಾಗಿ ನಡೆಯುವ `ಶ್ರೀಕೃಷ್ಣ ಲೋಕ’ 24ನೇ ವರ್ಷದ ಕಾರ್ಯಕ್ರಮವು ಆ.19ರಂದು ಜರುಗಿತು.

ಬೆಳಿಗ್ಗೆ ಮಕ್ಕಳಿಂದ ಪ್ರಾರ್ಥನೆ ನಡೆದ ಬಳಿಕ ಕೃಷ್ಣ, ರಾಧೆಯರ ನೊಂದಾವಣೆಯು ಪ್ರಾರಂಭಗೊಂಡಿತು. ಬಳಿಕ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಹಾಗೂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಭಜನೆ ಜರುಗಿತು. ನಂತರ ತೊಟ್ಟಲ ಸಂಭ್ರಮದ ಮಗುವಿನ ಅಮ್ಮನಿಗೆ ಆರತಿ ಬೆಳಗಿ ಬಾಗಿನ ನೀಡಿ, ಆರು ತಿಂಗಳ ಮಗುವನ್ನು ತೊಟ್ಟಿಲಲ್ಲಿ ತೂಗಿ, ಬೆಣ್ಣೆ ತಿನ್ನಿಸಿ, ಮಾತೆಯರು ಜೋಗುಲ ಹಾಡಿ ಸಂಭ್ರಮಿಸಿದರು.

ಮೇಲೈಸಿದ ಶೋಭಾಯಾತ್ರೆ:

ನಂತರ ಶ್ರೀಕೃಷ್ಣ, ರಾಧೆಯ ವೇಷಧಾರಿ ಪುಟಾಣಿಗಳ ಶೋಭಾಯಾತ್ರೆಯ ಪ್ರಾರಂಭಗೊಂಡಿತು. ವಿವೇಕಾನಂದ ಶಿಶು ಮಂದಿರದ ಆವರಣದ ಬಳಿಯಿಂದ ಹೊರಟು ಮೊಳಹಳ್ಳಿ ಶಿವರಾಯ ವೃತ್ತವಾಗಿ ಕೋರ್ಟ್‌ರಸ್ತೆ, ಮುಖ್ಯರಸ್ತೆಯ ಮೂಲಕ ಸಾಗಿ ಪ್ರಧಾನ ಅಂಚೆ ಕಚೇರಿ ಮುಂಭಾಗದಿಂದಾಗಿ ಮಹಾಲಿಂಗೇಶ್ವರ ದೇವಸ್ಥಾನ ಬಳಿಗೆ ಆಗಮಿಸಿತು. ನಂತರ ಮಹಾಲಿಂಗೇಶ್ವರ ದೇವಸ್ಥಾನದ ಒಳಗೆ ತೆರಳಿ ದೇವರಿಗೆ ಪ್ರದಕ್ಷಿಣೆಯು ಈ ಬಾರಿ ವಿಶೇಷವಾಗಿ ನಡೆಸಿ, ನಂತರ ದೇವಸ್ಥಾನದ ನಟರಾಜ ವೇದಿಕೆಯ ಬಳಿ ಶೋಭಾಯಾತ್ರೆಯು ಸಂಪನ್ನಗೊಂಡಿತು. ಸುಮಾರು 1300 ಶ್ರೀ ಕೃಷ್ಣ ಹಾಗೂ ರಾಧೆಯರ ವೇಷ ಧರಿಸಿದ ಪುಟಾಣಿಗಳು ಶೋಭಾಯಾತ್ರೆಯಲ್ಲಿ ಹೆಜ್ಜೆಹಾಕಿದರು.

ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಶಾಂಕ ಕೊಟೇಚಾ ತೆಂಗಿನಕಾಯಿ ಒಡೆದು ಶೋಭಾಯಾತ್ರೆ ಉದ್ಘಾಟಿಸಿದರು. ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ, ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಧ್ವಜ ಹಸ್ತಾಂತರಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ನಗರ ಸಭಾ ಉಪಾಧ್ಯಕ್ಷೆ ವಿದ್ಯಾ ಗೌರಿ, ಡಾ.ಕಮಲ ಪ್ರಭಾಕರ ಭಟ್ ಕಲ್ಲಡ್ಕ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಶಿಶು ಮಂದಿರದ ಅಧ್ಯಕ್ಷ ರಾಜ್ ಗೋಪಾಲ, ಕೃಷ್ಣ ಲೋಕ ಕಾರ್ಯಕ್ರಮದ ಗೌರವಾಧ್ಯಕ್ಷೆ ರಾಜಿ ಬಲರಾಮ ಆಚಾರ್ಯ, ಅಧ್ಯಕ್ಷ ಉಪೇಂದ್ರ ಬಲ್ಯಾಯ, ಕಾರ್ಯದರ್ಶಿ ದಾಮೋದರ ಪಾಟಾಳಿ ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here