ಪುತ್ತೂರು:ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅರುಣ್ ಕುಮಾರ್ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಸ್ಮಶಾನದ ಬಳಿಯಲ್ಲಿ ಅವರು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ಅವರು ವಿಷ ಪದಾರ್ಥ ಸೇವಿಸಿರುವುದು ತಿಳಿದು ಬಂದಿದೆ.ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.