ಕುಂಬ್ರ: ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವಾರ್ಪಣೆ

0

ಕುಂಬ್ರ:ಒಕ್ಕಲಿಗ ಗೌಡ ಸೇವಾ ಸಂಘ ಒಳಮೊಗ್ರು ಗ್ರಾಮ ಸಮಿತಿ, ಯುವ ಘಟಕ ಮಹಿಳಾ ಘಟಕದ ಸಹಕಾರದೊಂದಿಗೆ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಒಳಮೊಗ್ರು ಇದರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಆ 21 ರಂದು ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರಾಮಣ್ಣ ಗೌಡ ಬೋಳ್ಳಡಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು

ಕಾರ್ಯಕ್ರಮವನ್ನು ನಿವೃತ್ತ ಅರಣ್ಯ ಅಧಿಕಾರಿ ರಾಮಣ್ಣ ಗೌಡ ಬೊಳ್ಳಡಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಕೆಯ್ಯೂರು, ಗೌಡ ಸಮುದಾಯದ ಸಂಸ್ಕೃತಿ ಆಚಾರ ವಿಚಾರಗಳನ್ನು ಕಾರ್ಯಕ್ರಮಗಳಲ್ಲಿ ಕಟ್ಟು ನಿಟ್ಟಾಗಿ ಪಾಲಿಸಿಕೊಂಡು ಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಬೇಕು. ಸಂಘಟಿತ ಮನೋಭಾವನೆಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ನಾಯಕತ್ವ ಗುಣವನ್ನು ಬೆಳೆಸಿಕೊಂಡು ಸಮಾಜದಲ್ಲಿ ಉನ್ನತ ವ್ಯಕ್ತಿಗಳಾಗಿ ಮೂಡಿಬರಬೇಕು ಎಂದರು.

ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಗೌಡ ಕೇಡೆಂಜಿ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪಣತೊಡಬೇಕು ಎಂದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಅಧ್ಯಕ್ಷರಾದ ಡಿ ವಿ ಮನೋಹರ್ ಮಾತನಾಡಿ ಸಮಾಜವನ್ನು ಸಂಘಟಿಸುವುದರ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಆರ್ಥಿಕವಾಗಿ ಸದೃಢವಾಗಬೇಕು, ಸ್ವಾವಲಂಬಿ ಜೀವನ ನಡೆಸಬೇಕು ಎಂಬ ದ್ಯೆಯೋದ್ಧೇಶದಿಂದ ಆರಂಭಗೊಂಡ ಸ್ವ ಸಹಾಯ ಟ್ರಸ್ಟ್ ಇದೀಗ 750 ಕ್ಕೂ ಮಿಕ್ಕಿ ಸ್ವ ಸಹಾಯ ಸಂಘಗಳನ್ನು ರಚಿಸಿಕೊಂಡು ಹಲವಾರು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು ಇನ್ನು ಹೆಚ್ಚಿನ ಪ್ರಗತಿಗೆ ಎಲ್ಲರ ಸಹಕಾರ ಅಗತ್ಯ ಎಂದರು.

ಒಕ್ಕಲಿಗ ಸ್ವ ಸಹಾಯ ಗುಂಪುಗಳ ಒಕ್ಕೂಟ ಕುಂಬ್ರ ವಲಯದ ಅಧ್ಯಕ್ಷ ಲೋಕೇಶ್ ಚಾಕೋಟೆ ಮಾತನಾಡಿ ವಲಯದ ಒಕ್ಕೂಟಗಳ ಮೂಲಕ ಪ್ರತಿ ಗ್ರಾಮಗಳಲ್ಲಿ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮುದಾಯವನ್ನು ಸಂಘಟಿಸಲಾಗುತ್ತಿದೆ ಎಂದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ

ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಒಳಮೊಗ್ರು ಇದರ ಅಧ್ಯಕ್ಷ ಹೂವಪ್ಪ ಗೌಡ ಮಾತನಾಡಿ ಮಕ್ಕಳಿಗೆ ಸನಾತನ ಹಿಂದೂ ಧರ್ಮದ ಆಚಾರ ವಿಚಾರ, ಸಂಸ್ಕೃತಿ ಸಂಸ್ಕಾರ, ಧರ್ಮಚಾರಣೆಯ ಅವಶ್ಯಕತೆ, ಗುರುಹಿರಿಯರನ್ನು ಗೌರವಿಸುವ ಜೊತೆಗೆ, ರಾಷ್ಟ್ರಭಕ್ತಿಯ ಬಗ್ಗೆ ಧರ್ಮ ಜಾಗ್ರತಿಯನ್ನು ಹೆತ್ತವರು ಮೂಡಿಸಬೇಕಾದ ಅಗತ್ಯವಿದೆ ಎಂದರು. ಒಕ್ಕಲಿಗ ಗೌಡ ಸೇವಾ ಸಂಘದ ಗ್ರಾಮ ಸಮಿತಿ ಕಾರ್ಯದರ್ಶಿ ವಿಶ್ವನಾಥ ಗೌಡ ಬೋಳ್ಳಡಿ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ಯುವ ಒಕ್ಕಲಿಗ ಘಟಕದ ಕಾರ್ಯದರ್ಶಿ ಸುಬ್ರಾಯ ಗೌಡ ಪಾಲ್ತಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಗ್ರಾಮ ಸಮಿತಿ ಅಧ್ಯಕ್ಷರಾದ ದಾಸಪ್ಪ ಗೌಡ ನಿರ್ಪಾಡಿ, ಮಹಿಳಾ ಘಟಕದ ಅಧ್ಯಕ್ಷೆ ಉಷಾ ನಾರಾಯಣ ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವಾರ್ಪಣೆ

ಕಾರ್ಯಕ್ರಮದಲ್ಲಿ ಗ್ರಾಮದ ಸುಮಾರು 50ಕ್ಕೂ ಹೆಚ್ಚಿನ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು ಹಾಗೂ 2021-2022ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಸಾಧನೆಗೈದ ನಿರ್ಪಾಡಿ ಶೇಷಪ್ಪ ಗೌಡ ಮತ್ತು ಚಿತ್ರವತಿ ದಂಪತಿ ಪುತ್ರಿ ಕವನ ಎನ್ ಎಸ್, ನಿರ್ಪಾಡಿ ಕುಶಾಲಪ್ಪ ಗೌಡ ರಾಜೀವಿ ದಂಪತಿ ಪುತ್ರಿ ಗಣ್ಯಶ್ರೀ, ಪರ್ಪುಂಜ ರಾಧಾಕೃಷ್ಣ ಪ್ರಮೀಳಾ ದಂಪತಿ ಪುತ್ರಿ ರಕ್ಷಾ ಕೆ ಆರ್, ನಿರ್ಪಾಡಿ ದಾಸಪ್ಪ ಗೌಡ ಕುಸುಮಾವತಿ ದಂಪತಿ ಪುತ್ರ ಕೌಶಲ್ ಎನ್ ಡಿ, ಕುಂಬ್ರ ರಾಧಾಕೃಷ್ಣ ನೇತ್ರಾ ದಂಪತಿ ಪುತ್ರಿ ಶ್ರಾವ್ಯ ರವರನ್ನು ಶಾಲು ಹೊದಿಸಿ, ಹಾರ ಹಾಕಿ, ಸ್ಮರಣಿಕೆ, ಹೂ ನೀಡಿ ಸನ್ಮಾನಿಸಲಾಯಿತು.

ಯುವ ಘಟಕದ ಅಧ್ಯಕ್ಷರಾದ ನಾಗೇಶ ಗೌಡ ಕೇಡೆಂಜಿ ಮಾತನಾಡಿದರು

ಭಾರತೀಯ ಸೇನೆಯಲ್ಲಿ ಸುಮಾರು 26 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿಗೊಂಡ ದಯಾನಂದ ಗೌಡ ನಿರ್ಪಾಡಿ, ಕುಂಬ್ರ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಯಾಗಿ ಭಡ್ತಿಗೊಂಡಿರುವ ಭವಾನಿ ಬೋಳ್ಳಡಿ, ಟೆಲಿಕಾಮ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ನಿವೃತ್ತಿಗೊಂಡ ಕೇಶವ ಗೌಡ ಹಾಗೂ ರಾಧಾಕೃಷ್ಣ ಗೌಡ ಕುಂಬ್ರ ಮತ್ತು ಸಿ ಎ ಪರೀಕ್ಷೆಯಲ್ಲಿ ಸಾಧನೆಗೈದ ರಾಮಯ್ಯ ಗೌಡ ವಸಂತಿ ದಂಪತಿ ಪುತ್ರ ತುಷಾರ್ ಗೌಡ ಬೋಳ್ಳಡಿ ರವರನ್ನು ಶಾಲು ಹೊದಿಸಿ ಹಾರ ಹಾಕಿ, ಹೂ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷರಾದ ಡಿ ವಿ ಮನೋಹರ್ ಮಾತನಾಡಿದರು

ಕಾರ್ಯಕ್ರಮದಲ್ಲಿ ತನ್ವಿ ಬೋಳ್ಳಡಿ ಪ್ರಾರ್ಥಿಸಿದರು. ಶ್ರೀ ಭಗವದ್ಗೀತೆಯ ಚಿಂತನವನ್ನು ಜಯಂತಿ ಬೋಳ್ಳಡಿ ವಾಚಿಸಿದರು. ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಮೇಲ್ವಿಚಾರಕರಾದ ವಿಜಯಕುಮಾರ್, ಪ್ರೇರಕರಾದ ಶ್ರೀಕಾಂತ್ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಉಷಾನಾರಾಯಣ ವಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಕೆಯ್ಯೂರು ಮಾತನಾಡಿದರು

LEAVE A REPLY

Please enter your comment!
Please enter your name here