ಕುಡ್ತಮುಗೇರು: ದ್ವಿಚಕ್ರವಾಹನಗಳ ಮಧ್ಯೆ ಅಪಘಾತ – ಓರ್ವ ಮೃತ್ಯು

0

ವಿಟ್ಲ: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನವೊಂದರ ಸಹ ಸವಾರರೋರ್ವರು ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.


ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರರವರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ ಶೇಖ(50 ವ.) ರವರು ಮೃತ ದುರ್ದೈವಿ.
ವಿಟ್ಲದ ಕುಡ್ತಮುಗೇರು ಸಮೀಪ ಎರಡು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ದ್ವಿಚಕ್ರ ವಾಹನದ ಸಹ ಸವಾರರಾಗಿದ್ದ ಚಂದ್ರಹಾಸ ಶೇಖ ರವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಯಿಯಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರೆಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here