ಗೋಳಿತ್ತೊಟ್ಟು: 1575ನೇ ಮದ್ಯವರ್ಜನ ಶಿಬಿರ ಉದ್ಘಾಟನೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಪುತ್ತೂರು ತಾಲೂಕು ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗೋಳಿತ್ತೊಟ್ಟು, ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಗೋಳಿತ್ತೊಟ್ಟು, ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಗೋಳಿತ್ತೊಟ್ಟು, ಶ್ರೀ ಸಿದ್ಧಿವಿನಾಯಕ ಮಾತೃಮಂಡಳಿ ಗೋಳಿತ್ತೊಟ್ಟು, ಗ್ರಾಮ ಪಂಚಾಯತ್ ಗೋಳಿತ್ತೊಟ್ಟು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು, ನವಜೀವನ ಸಮಿತಿ, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಹಯೋಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರಗುವ 1575ನೇ ಮದ್ಯವರ್ಜನ ಶಿಬಿರ ಆ.22ರಂದು ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಕಲಾಮಂದಿರದಲ್ಲಿ ಉದ್ಘಾಟನೆಗೊಂಡಿತು.

ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಆಡಳಿತ ಮೊಕ್ತೇಸರ ಧನ್ಯಕುಮಾರ್ ರೈ ಬಿಳಿಯೂರುಗುತ್ತು ಉದ್ಘಾಟಿಸಿ ಶಿಬಿರ ಯಶಸ್ವಿಯಾಗಿ ನಡೆಯಲಿ ಎಂದು ಹೇಳಿ ಶುಭಹಾರೈಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಜಿ.ಮಹಾಬಲ ರೈ ಅಧ್ಯಕ್ಷತೆ ವಹಿಸಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಕೆ.ವಿ., ಖ್ಯಾತ ಜ್ಯೋತಿಷಿ ಶ್ರೀಧರ ಗೋರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ನಿಕಟಪೂರ್ವ ಅಧ್ಯಕ್ಷರೆ ವಿಮಲರಂಗಯ್ಯ, ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ.ಟ್ರಸ್ಟ್‌ನ ದ.ಕ.ಜಿಲ್ಲೆ-2 ಇದರ ನಿರ್ದೇಶಕ ಪ್ರವೀಣ್‌ಕುಮಾರ್, ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ.ಶಾಲೆ ನಿವೃತ್ತ ಮುಖ್ಯಗುರು ಟಿ.ನಾರಾಯಣ ಭಟ್, ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಅಲೆಕ್ಕಿ, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಪಟೇರಿ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಂದರ್ಭೋಚಿತವಾಗಿ ಮಾತನಾಡಿದರು.

ಗೋಳಿತ್ತೊಟ್ಟು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಕಲಾಮಂದಿರದ ಅಧ್ಯಕ್ಷ ವೆಂಕಪ್ಪ ಗೌಡ ಡೆಬ್ಬೇಲಿ, ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಅಧ್ಯಕ್ಷ ವಿಶ್ವನಾಥ ಮೂಲ್ಯ, ಗೋಳಿತ್ತೊಟ್ಟು ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ವೀರೇಂದ್ರ ಪಾಲೆತ್ತಡ್ಡ, ಪ್ರಗತಿಬಂಧು ಸ್ವಸಹಾಯ ಸಂಘಗಳ ಗೋಳಿತ್ತೊಟ್ಟು ಒಕ್ಕೂಟದ ಅಧ್ಯಕ್ಷೆ ಜಯಮಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದ ಸಂಚಾಲಕರೂ ಆದ, ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಎನ್.ಸ್ವಾಗತಿಸಿ, ಮೇಲ್ವಿಚಾರಕ ರವಿಪ್ರಸಾದ್ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನಾ ಕಾರ್ಯಕ್ರಮ ನಿರೂಪಿಸಿದರು. ವೀರೇಂದ್ರ ಪಾಲೆತ್ತಡ್ಡ ಪ್ರಾರ್ಥಿಸಿದರು. ಆ.29ರಂದು ಶಿಬಿರ ಸಮಾರೋಪಗೊಳ್ಳಲಿದೆ.

LEAVE A REPLY

Please enter your comment!
Please enter your name here