ವಿಟ್ಲ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

0

ವಿಟ್ಲ: ಕುಸಿದು ಬಿದ್ದು ತೆಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಲ್ಲಿ ವಾಸವಿರುವ ಮೊಯ್ದಿನ್ ಎಂದು ಗುರುತಿಸಲಾಗಿದೆ.

ವಿಟ್ಲ ಖಾಸಗಿ ಬಸ್ ನಿಲ್ದಾಣದ ರಿಕ್ಷಾ ಪಾರ್ಕಿಂಗ್ ಬಳಿ ಮೊಯ್ದೀನ್ ರವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾದ ಪರಿಣಾಮ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರು ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here