ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 168ನೇ ಜನ್ಮದಿನಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ಸೆ.10ರಂದು ಸಂಘದ ಸಭಾಭವನದಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 168ನೇ ಜನ್ಮದಿನಾಚರಣೆಯ ಆಮಂತ್ರಣ ಪತ್ರಿಕೆಯನ್ನು ಆ.21ರಂದು ನಡೆದ ಸಂಘದ ಮಾಸಿಕ ಸಭೆಯಲ್ಲಿ ಬಿಡುಗಡೆಗೊಳಿಸಿದರು.

ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಉಪಾಧ್ಯಕ್ಷರಾದ ಡಾ.ಸದಾನಂದ ಕುಂದರ್, ಚಂದ್ರಕಲಾ ಮುಕ್ವೆ, ಕಾರ್ಯದರ್ಶಿ ನಾಗೇಶ್ ಬಲ್ನಾಡು, ಜತೆ ಕಾರ್ಯದರ್ಶಿ ಚಿದಾನಂದ ಸುವರ್ಣ, ಕೋಶಾಧಿಕಾರಿ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್, ಗುರುಮಂದಿರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ, ಅರ್ಚಕ ಜಗದೀಶ ಶಾಂತಿ, ಸದಸ್ಯರಾದ ಮಾಧವ ಸಾಲ್ಯಾನ್, ಅಣ್ಣಿ ಪೂಜಾರಿ, ಸದಾನಂದ ಕುಮಾರ್ ಮಾಜಿ ಅಧ್ಯಕ್ಷ ಕೆ.ಪಿ ದಿವಾಕರ, ಹಿರಿಯರಾದ ಆನಂದ ಟೈಲರ್, ವಿದ್ಯಾನಿಧಿ ಸಂಚಾಲಕ ಮನೋಹರ್ ಎ, ಮಹಿಳಾ ಸಂಚಾಲಕಿ ವಿಶಾಲಾಕ್ಷಿ ಬನ್ನೂರು, ವಿವಿಧ ಗ್ರಾಮ ಸಮಿತಿ ಪದಾಧಿಕಾರಿಗಳು, ವಲಯ ಸಂಚಾಲಕರು, ನಗರ ಪ್ರತಿನಿಧಿಗಳು, ಮಹಿಳಾ ವೇದಿಕೆ ಪದಾಧಿಕಾರಿಗಳು, ಯುವವಾಹಿನಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here