ಸೆ.2 : ಪ್ರಧಾನಿ ಮೋದಿ ಮಂಗಳೂರಿಗೆ – 1200 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಿಲಾನ್ಯಾಸ, ಲೋಕಾರ್ಪಣೆ

0

ಮಂಗಳೂರು:ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ದಲ್ಲಿ ಸುಮಾರು 1200 ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ದ.ಕ.ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.

ಸೆ.2ರಂದು ಬೆಳಗ್ಗೆ ಕೊಚ್ಚಿನ್ ಬಂದರು ಕಾರ್ಯಕ್ರಮದ ಬಳಿಕ ಸಂಜೆ 3.45ಕ್ಕೆ ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು,ಎನ್‌ಎಂಪಿಎಗೆ ಭೇಟಿ ನೀಡಿ ಅಲ್ಲಿ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ನೆರವೇರಿಸಲಿರುವರು.ಸಂಜೆ 5 ಗಂಟೆಗೆ ನೆಹರೂಮೈದಾನ ಇಲ್ಲವೇ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ.ಇನ್ನೆರಡು ದಿನಗಳಲ್ಲಿ ಕಾರ್ಯಕ್ರಮದ ರೂಪುರೇಷೆ ಅಂತಿಮಗೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು.

ಆ ದಿನ ಬೆಳಗ್ಗೆ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ದೇಶದ ಪ್ರಥಮ ಸ್ವದೇಶಿ ನಿರ್ಮಿತ ವಿಕ್ರಾಂತ್ ಯುದ್ಧವಾಹಕ ನೌಕೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡುವರು.ಅಪರಾಹ್ನ ಮಂಗಳೂರಿಗೆ ಆಗಮಿಸಿ ಎನ್‌ಎಂಪಿಎ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ದೆಹಲಿಗೆ ತೆರಳುವ ಸಾಧ್ಯತೆಗಳಿವೆ.ಅವರ ಪ್ರವಾಸದ ಅಧಿಕೃತ ವೇಳಾಪಟ್ಟಿ ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳಲಿದೆ.ನವಮಂಗಳೂರು ಬಂದರಿಗೆ ಭೇಟಿ ನೀಡುವ ಪ್ರಧಾನಿಯವರು ಅಲ್ಲಿ ಈಗಾಗಲೇ ಪೂರ್ಣಗೊಂಡಿರುವ ಅನಘಾ ರಿಫೈನರಿ, ಬರ್ತ್ ನಂ.14 ಸೇರಿದಂತೆ 6 ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.ಇದೇ ವೇಳೆ ಸಾಗರಮಾಲಾ ಯೋಜನೆಯ ಕೆಲವು ಅಭಿವೃದ್ಧಿ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.ಪ್ರಧಾನಿಯವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಬಂದರು, ನೌಕಾಯಾನ ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರು ಭಾಗವಹಿಸಲಿದ್ದಾರೆ.ಸರ್ಕಾರಿ ಕಾರ್ಯಕ್ರಮದಲ್ಲಿ ಮಾತ್ರ ಪ್ರಧಾನಿಯವರು ಭಾಗವಹಿಸಲಿದ್ದು ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತದೆ.ಬಿಜೆಪಿಯಿಂದ ಪ್ರತ್ಯೇಕ ಕಾರ್ಯಕ್ರಮ ಆಯೋಜಿಸಿಲ್ಲ ಎಂದು ಕಟೀಲ್ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here