ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ‌ದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ರವರಿಗೆ ಮುಖ್ಯಮಂತ್ರಿ ಪ್ರಶಸ್ತಿ

0

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 3 ವರ್ಷದ ಹಿಂದೆ ಕರ್ತವ್ಯ ನಿರ್ವಹಿಸಿದ್ದು ಪ್ರಸ್ತುತ ಜಿಲ್ಲಾ ಸರ್ವೇಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಜಗದೀಶ್ ಅವರು ‘ಉತ್ತಮ ಕಾರ್ಯಕ್ರಮ ಅನುಷ್ಠಾನಾಧಿಕಾರಿ’ ಮುಖ್ಯಮಂತ್ರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಷ್ಡ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಡಾ ಜಗದೀಶ್ ರವರು ಈ ಹಿಂದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೂ‌ ನಿಯೋಜನೆ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಅವರು ಮಂಗಳೂರಿಗೆ ವರ್ಗಾವಣೆಗೊಂಡಿದ್ದರು. ಪ್ರಸ್ತುತ ಅವರು ಜಿಲ್ಲಾ ಸವೇಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು. ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮ ಅನುಷ್ಠಾನ ಮಾಡಿರುವುದನ್ನು ಗುರುತಿಸಿ ಅವರನ್ನು ರಾಷ್ಟ್ರೀಯ ವೈದ್ಯರ ದಿನಾಚರಣೆಯಂಗವಾಗಿ ಸರಕಾರದಿಂದ  ನೀಡಲಾಗುವ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆ.24 ರಂದು ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here