ರಾಮಕುಂಜ: ಪುತ್ತೂರು ತಾ| ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ವಾಲಿಬಾಲ್ ಪಂದ್ಯಾಟ

0

ರಾಮಕುಂಜ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಽಕಾರಿಗಳ ಕಚೇರಿ ಪುತ್ತೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಕುಂಜ ಇವರ ಸಹಯೋಗದಲ್ಲಿ 2022ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ.22ರಂದು ರಾಮಕುಂಜ ಸರಕಾರಿ ಹಿ.ಪ್ರಾ.ಶಾಲೆಯ ಮೈದಾನದಲ್ಲಿ ನಡೆಯಿತು.

ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಎನ್.ಕೆ.ಅವರು ಪಂದ್ಯಾಟ ಉದ್ಘಾಟಿಸಿ ಶುಭಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ ನೆಲ್ಯಾಡಿ, ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ., ಕಡಬ ತಾಲೂಕು ವಾಲಿಬಾಲ್ ಎಸೋಸಿಯೇಶನ್ ಅಧ್ಯಕ್ಷ ಲಕ್ಷ್ಮೀನಾರಾಯಣ ರಾವ್ ಆತೂರು, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅವರು ಮಾತನಾಡಿ ಪಂದ್ಯಾಟಕ್ಕೆ ಶುಭಹಾರೈಸಿದರು. ಪುತ್ತೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಓಬಳೇಶ್, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ.ಸವಣೂರು, ಉಪಾಧ್ಯಕ್ಷೆ ಜಯಂತಿ ಬಿ.ಎಂ., ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕರೀಂ ಹೇಂತಾರು, ಪುತ್ತೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ, ರಾಮಕುಂಜ ಗ್ರಾ.ಪಂ.ಪಿಡಿಒ ಜೆರಾಲ್ಡ್ ಮಸ್ಕರೇನಸ್, ಆಲಂಕಾರು ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ನಿಂಗರಾಜು ಕೆ.ಪಿ., ಪಟ್ಟೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಪಟ್ಟೆ, ಆತೂರು ಬದ್ರಿಯಾ ಶಾಲೆಯ ಆಡಳಿತ ಮಂದಳಿ ಅಧ್ಯಕ್ಷ ಆದಂ, ಎಸ್‌ಡಿಎಂಸಿ ದ.ಕ.ಜಿಲ್ಲಾ ಕಾರ್ಯದರ್ಶಿ ಸೆಲಿಕಾ ಕೆಮ್ಮಾರ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ: ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುವ ರಾಮಕುಂಜ ಸರಕಾರಿ ಶಾಲಾ ಬಾಲಕರ ವಾಲಿಬಾಲ್ ತಂಡಕ್ಕೆ ತರಬೇತಿ ನೀಡಿದ ನೆಲ್ಯಾಡಿ ಬೆಥನಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮನೋಜ್ ಕೆ.ಜೆ., ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಚಂದ್ರ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ಜಾನ್ ಸನ್ಮಾನಿತರನ್ನು ಪರಿಚಯಿಸಿದರು. ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ ಮಹೇಶ್ ಸ್ವಾಗತಿಸಿ, ಸಹಶಿಕ್ಷಕ ಅರುಣ್‌ಕುಮಾರ್ ಶೇಟ್ ವಂದಿಸಿದರು. ಸಹಶಿಕ್ಷಕ ಮಲ್ಲೇಶಯ್ಯ, ಅತಿಥಿ ಶಿಕ್ಷಕಿ ರಾಽಕಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು

 ಬಾಲಕರ ವಿಭಾಗದಲ್ಲಿ ಬೆಥನಿ, ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಶಾಲೆ ಚಾಂಪಿಯನ್

ಬಾಲಕರ ವಿಭಾಗದಲ್ಲಿ ಪುತ್ತೂರು ದರ್ಬೆ ಬೆಥನಿ ಆಂಗ್ಲಮಾಧ್ಯಮ ಶಾಲೆ ಪ್ರಥಮ ಹಾಗೂ ಇಂದ್ರಪ್ರಸ್ಥ ಉಪ್ಪಿನಂಗಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಹಿ.ಪ್ರಾ.ಶಾಲೆ ಪ್ರಥಮ ಹಾಗೂ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ ೧೦ ಹಾಗೂ ಬಾಲಕಿಯರ ವಿಭಾಗದಲ್ಲಿ 9 ತಂಡಗಳ ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಎಸ್‌ಕೆಎಸ್‌ಎಸ್‌ಎಫ್ ನ ಆತೂರು ಶಾಖೆಯ ವತಿಯಿಂದ ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಎಸ್‌ಕೆಎಸ್‌ಎಸ್‌ಎ-ನ ವಿಖಾಯ ತಂಡದ ಸದಸ್ಯರು ಊಟದ ವ್ಯವಸ್ಥೆ ನಿರ್ವಹಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್‌ಕೆಎಸ್‌ಎಸ್‌ಎಪ್‌ ನ ಆತೂರು ಶಾಖೆ ಸಿದ್ದೀಕ್ ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here