ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ನ 2021-22 ನೇ ಸಾಲಿನ ಜಮಾಬಂದಿ ಸಭೆ ಅ.25 ರಂದು ಬೆಳಿಗ್ಗೆ ಗಂಟೆ 11 ಕ್ಕೆ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಲಿದೆ. ಸಭೆಯಲ್ಲಿ ಗ್ರಾಮ ಪಂಚಾಯತು ಲೆಕ್ಕ ಪತ್ರಗಳ ದಾಖಲೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಯಲಿದೆ. ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿರುವರು.
ಜಮಾಬಂದಿ ಸಭೆಯ ಬಳಿಕ 2022-23 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 14 ಮತ್ತು 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ನಡೆಯಲಿದ್ದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೊಡೆಲ್ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ ಎಂದು ಪಿಡಿಒ ಸಂದೇಶ್. ಎನ್ ತಿಳಿಸಿದ್ದಾರೆ.