ಪುತ್ತೂರು: ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಬುಧವಾರ ಬೆಳಿಗ್ಗೆ ಪುತ್ತೂರು ಕೃಷಿ ಇಲಾಖೆಯ ಸಭಾಂಗಣದಲ್ಲಿ PMFME ಯೋಜನೆಯಡಿ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಆಹಾರ ವಿಜ್ಞಾನಿ ಹಾಗೂ ನಿವೃತ್ತ ಪ್ರಾಧ್ಯಾಪಕ, ಕಿರು ಆಹಾರ ಸಂಸ್ಕರಣಗಳ ಉದ್ದಿಮೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಡಾ. ಎ.ಎ. ಫಝಲ್ ಅವರು ಮಾಹಿತಿ ನೀಡಿದರು.
ಉಪಕೃಷಿ ನಿರ್ದೇಶಕ ಶಿವಶಂಕರ್ ಎಚ್. ದಾನೆಗೊಂಡರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ರೇಖಾ, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಸಂಕಪ್ಪ ಶೆಟ್ಟಿ, ಸತೀಶ್ ಮಾಬೆನ್, ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ಸುಮಿತ್ ವಾಟೆ, ಮೆನೇಜರ್ ತರುಣ್ ಉಪಸ್ಥಿತರಿದ್ದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾರಾಯಣ ಶೆಟ್ಟಿ ಸ್ವಾಗತಿಸಿ, ಕೃಷಿ ಅಧಿಕಾರಿ ಯಶಸ್ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.