ಬೆಂಗಳೂರು: ರಾಜ್ಯ ಸರಕಾರದಿಂದ ರಚಿಸಲ್ಪಟ್ಟು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದ.ರಾ ಬೇಂದ್ರೆ, ಮಾಸ್ತಿ, ಶಿವರಾಮಕಾರಂತ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಸೇರಿದಂತೆ ಒಟ್ಟು 21 ಟ್ರಸ್ಟ್ / ಪ್ರತಿಷ್ಠಾನಗಳಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ನೇಮಿಸಿ ಹೊರಡಿಸಿದ್ದ ಸರಕಾರದ ಅಧಿಸೂಚನೆಯನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ರವರು ಆದೇಶ ಹೊರಡಿಸಿದ್ದಾರೆ.