ಕಬಕ:ವಿದ್ಯುತ್ ಕಂಬಕ್ಕೆ ಮಿನಿ ಲಾರಿ ಡಿಕ್ಕಿ

0

ಪುತ್ತೂರು:ಪುತ್ತೂರಿಗೆ ಬರುತ್ತಿದ್ದ ಗೂಡ್ಸ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಆ.25ರ ಸಂಜೆ ಕಬಕ ಸಮೀಪ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದೆ.

ಪುತ್ತೂರು ಮಳಿಗೆಯೊಂದಕ್ಕೆ ದಿನಸಿ ಸಾಮಾಗ್ರಿಗಳನ್ನು ಪೂರೈಸುತ್ತಿದ್ದ ಗೂಡ್ಸ್ ಲಾರಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಬಕ ಸಮೀಪ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ಸಂಭಾವ್ಯ ದುರಂತವೊಂದು ತಪ್ಪಿದೆ. ತುಂಡಾದ ವಿದ್ಯುತ್ ಕಂಬದ ಮೊತ್ತವನ್ನು ಭರಿಸುವಂತೆ ಲಾರಿ ಚಾಲಕನ ವಿರುದ್ಧ ಮೆಸ್ಕಾಂನಿಂದ ಪೊಲೀಸರಿಗೆ ದೂರು ನೀಡಲಾಗಿದೆ.

LEAVE A REPLY

Please enter your comment!
Please enter your name here