ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ
ಪುತ್ತೂರು: ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ನಿಂದ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಆ.27ರಂದು ಪುತ್ತೂರು ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ರವರು ರಿಬ್ಬನ್ ತುಂಡರಿಸುವ ಮೂಲಕ ಉದ್ಘಾಟಿಸಿ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ವೀಕ್ಷಿಸಿ ಶುಭ ಹಾರೈಸಿದರು. ಪುತ್ತೂರು ಮಾಯಿದೆ ದೇವುಸ್ ಚರ್ಚ್ನ ಪ್ರಧಾನ ಧರ್ಮಗುರು ರೆವರೆಂಡ್ ಫಾದರ್ ಲಾರೆನ್ಸ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ರೆವರೆಂಡ್ ಫಾದರ್ ಕೆವಿನ್ ಲಾರೆನ್ಸ್ ಡಿಸೋಜಾ, ಡಾ.ನಝೀರ್ ಅಹ್ಮದ್, ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಸದಾನಂದ ಕೆ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ನ ಅಧ್ಯಕ್ಷ ರಫೀಕ್ ದರ್ಬೆ, ಸೀರತ್ ಕಮಿಟಿ ಅಧ್ಯಕ್ಷ ಖಾದರ್ ಸುರಯ್ಯಾ, ಸಾಮಾಜಿಕ ಕಾರ್ಯಕರ್ತ ರೋಷನ್ ಡಯಾಸ್ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಮಲಬಾರ್ ಗೋಲ್ಡ್&ಡೈಮಂಡ್ ಮಂಗಳೂರು ಮಳಿಗೆಯ ಮುಖ್ಯಸ್ಥ ಶರತ್ ಚಂದ್ರನ್, ಮಾರ್ಕೆಟಿಂಗ್ ಮ್ಯಾನೇಜರ್ ಶೇಖ್ ಫರ್ಹಾನ್, ಡೆಪ್ಯುಟಿ ಮೆನೇಜರ್ ಗಿರೀಶ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು.
ಆ.27 ಮತ್ತು 28ರಂದು ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಆ.27ರಂದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.