ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಡಾ.ಎಂ.ಕೆ.ಪ್ರಸಾದ್‌ರಿಗೆ ಸನ್ಮಾನ- ಗಣೇಶೋತ್ಸವಕ್ಕೆ ದೇಣಿಗೆ ಸಮರ್ಪಣೆ

0

ಪುತ್ತೂರು: ಡಾಕ್ಟರ್ಸ್‌  ಡೇ ಪ್ರಶಸ್ತಿ ಪುರಸ್ಕೃತ ಆದರ್ಶ ಆಸ್ಪತ್ರೆಯ ಡಾ.ಎಂ.ಕೆ.ಪ್ರಸಾದ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆದರ್ಶ ಆಸ್ಪತ್ರೆಯಲ್ಲಿ ಸನ್ಮಾನಿಸಿದರು.


ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆ.28ರಂದು ಆದರ್ಶ ಆಸ್ಪತ್ರೆಗೆ ತೆರಳಿ ಡಾ.ಎಂ.ಕೆ.ಪ್ರಸಾದ್ ಅವರನ್ನು ಅಭಿನಂದಿಸಿ ಬಳಿಕ ಮಾತುಕತೆ ನಡೆಸಿದರು. ಇದೇ ಸಂದರ್ಭ ಅವರು ಹಿಂದುತ್ವ ಮತ್ತು ದೇಶ ಪ್ರೇಮವನ್ನು ಬೆಳೆಸುತ್ತಿರುವ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ದೇಣಿಗೆ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here