ಸ್ವಾತಂತ್ರ್ಯ ಹೋರಾಟಗಾರ ರಾಮಯ್ಯ ಗೌಡರ ಪ್ರತಿಮೆ ಪುರಪ್ರವೇಶ ಕಾರ್ಯಕ್ರಮ: ಬೆಂಗಳೂರಿನಲ್ಲಿ ಆದಿಚುಂಚನಗಿರಿ ಶ್ರೀಗಳ ಜೊತೆ ಪುತ್ತೂರು ಶಾಸಕ ಸಂಜೀವ ಮಠಂದೂರು

0

ಪುತ್ತೂರು: ಮಂಗಳೂರು ನಗರದ ಬಾವುಟ ಗುಡ್ಡದಲ್ಲಿ ಸ್ಥಾಪನೆಗೊಳ್ಳಲಿರುವ ಸಂಘಟನಾ ಚತುರ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರವರ ಕಂಚಿನ ಪ್ರತಿಮೆ ಪುರುಪ್ರವೇಶ ಕಾರ್ಯಕ್ರಮವು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಗುರುಭವನದಲ್ಲಿ ಆಯೋಜಿಸಲಾಗಿದ್ದು, ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಜೊತೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಸೇರಿಕೊಂಡು ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್, ದಕ್ಷಿಣ ಕನ್ನಡ ಜಿಲ್ಲೆಯ ಯುವ ಒಕ್ಕಲಿಗರ ಸಂಘದ ಅಧ್ಯಕ್ಷ ಅಕ್ಷಯ್ ಕೆ ಸಿ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉತ್ಸವ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾತ ಗೌಡ ಮತ್ತು ಹಲವಾರು ಗಣ್ಯರು ಉಪಸ್ಥಿತರಿದ್ದರು.

 

 

 

LEAVE A REPLY

Please enter your comment!
Please enter your name here