ಪುತ್ತೂರು: ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ವತಿಯಿಂದ ಆ.28ರಂದು ಶ್ರೀಕ್ಷೇತ್ರದಲ್ಲಿ ಅಭಿನಂದಿಸಿ ಗೌರವಿಸಲಾಯಿತು.
ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಸನ್ಮಾನಿಸಿ ಗೌರವಿಸಿದರು. ಪ್ರಮುಖರಾದ ಎನ್. ಉಮೇಶ್ ಶೆಣೈ, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೇಶವ ಭಂಡಾರಿ ಕೈಪ, ಜಯಪ್ರಕಾಶ್ ಬದಿನಾರು, ಯೋಗೀಶ್ ಎಸ್.ಸಾಮಾನಿ ಸಂಪಿಗೆದಡಿ, ಸುದೇಶ್ ಶೆಟ್ಟಿ ಶಾಂತಿನಗರ, ಪ್ರಕಾಶ್ ಶೆಟ್ಟಿ ಪಿಜಿನಡ್ಕ, ಪ್ರಭಾಕರ ಸಾಮಾನಿ ಮಠಂತಬೆಟ್ಟು, ರಾಮಚಂದ್ರ ಮಣಿಯಾಣಿ ಉಪ್ಪಿನಂಗಡಿ, ವಿಶ್ವನಾಥ ಶೆಟ್ಟಿ ಕಂಗ್ವೆ, ಶಿವಪ್ರಸಾದ್ ರೈ ಮಠಂತಬೆಟ್ಟು, ಪ್ರೀತಂ ಶೆಟ್ಟಿ ಮಠಂತಬೆಟ್ಟು, ವಿಜಯ ಕುಮಾರ್ ಚೀಮುಳ್ಳು ಮತ್ತಿತರರು ಉಪಸ್ಥಿತರಿದ್ದರು. ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಕೂಟೇಲು ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಕಂಬಳ ಸಮಿತಿ ವತಿಯಿಂದ ವಿಶೇಷವಾಗಿ ಗೌರವಿಸಲಾಯಿತು.