ನಳಿನ್‌  ಬಿಜೆಪಿ ರಾಜ್ಯಾಧ್ಯಕ್ಷರಾಗಿ 3 ವರ್ಷ ಪುತ್ತೂರು ಬಿಜೆಪಿ ಎರಡು ಮಂಡಲದಿಂದ ಸನ್ಮಾನ

0

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ 3 ವರ್ಷ ಯಶಸ್ವಿ ಆಡಳಿತ ಪೂರೈಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಪುತ್ತೂರು ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಸನ್ಮಾನಿಸಲಾಯಿತು.


ಅನ್ಯ ಕಾರ್ಯಕ್ರಮದ ನಿಮಿತ್ತ ಪುತ್ತೂರಿಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದ ಪುತ್ತೂರು ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲ ಮತ್ತು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ, ಪದಾಧಿಕಾರಿಗಳು ಅವರನ್ನು ಅಭಿನಂದಿಸಿದರು. ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ಹರಿಪ್ರಸಾದ್ ಯಾದವ್, ರಾಕೇಶ್ ರೈ ಕೆಡೆಂಜಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here