ಗಣೇಶೋತ್ಸವ ಕಾರ್ಯಕ್ರಮದ ಆಯೋಜಕರು ಮಾರ್ಗಸೂಚಿ ಪಾಲಿಸುವಂತೆ ನಗರಸಭೆ ಸೂಚನೆ

0

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಆಯೋಜಕರು ಸರಕಾರದ ಸುತ್ತೋಲೆಯಲ್ಲಿ ಸೂಚಿಸಿದಂತೆ ಮಾರ್ಗಸೂಚಿಯನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಮತ್ತು ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಆಯೋಜಕರು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಗಳಿಂದ ಕಡ್ಡಾಯವಾಗಿ ನಿಯಮಾನುಸಾರ ಪರವಾನಿಗೆಯನ್ನು ಪಡಕೊಳ್ಳತಕ್ಕದು, ಕಾಲಕಾಲಕ್ಕೆ ನ್ಯಾಯಾಲಯದ ನಿರ್ದೇಶನಗಳನ್ನು ಮತ್ತು ವಿವಿಧ ಇಲಾಖೆಗಳಿಂದ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕ ಸುರಕ್ಷತೆ ಮತ್ತು ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಅಗತ್ಯವಿರುವ ಕಡೆಗಳಲ್ಲಿ ಆಯೋಜಕರು ಸಿಸಿ ಕ್ಯಾಮರಗಳನ್ನು ಅಳವಡಿಸುವುದು, ಯಾವುದೇ ಪ್ರದೇಶದಲ್ಲಿ ಹೈ ಟೆನ್ಶನ್ ತಂತಿ ಹಾದು ಹೋಗಿದ್ದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸುವಂತಿಲ್ಲ. ಗಣೇಶ ಮೂರ್ತಿಯನ್ನು ಪ್ಲಾಸ್ಟರ್ ಆಫ್ ಫ್ಯಾರೀಸ್ ಅಥವಾ ಯಾವುದೇ ಪರಿಸರಕ್ಕೆ ಮಾರಕವಾಗುವ ವಸ್ತುಗಳಿಂದ ತಯಾರಿಸದೇ ಮಣ್ಣಿನಿಂದ ತಯಾರಿಸಿ ಪ್ರಾಕೃತಿಕ ಬಣ್ಣಗಳನ್ನು ಉಪಯೋಗಿಸಿ ಪರಿಸರ ಸ್ನೇಹಿತ ಗಣೇಶ ಮೂರ್ತಿಯನ್ನು ರಚಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಉಪಯೋಗಿಸುದಂತೆ ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here