ಆ. 30: ಪುತ್ತೂರು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಸೇವಾ ನಿವೃತ್ತಿ

0

ಪುತ್ತೂರು: ಪುತ್ತೂರು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಕೆ. ನಾರಾಯಣ ಶೆಟ್ಟಿರವರು ಆ. 30 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ನಾರಾಯಣ ಶೆಟ್ಟಿರವರು 1988 ರಲ್ಲಿ ಬಂಟ್ಯಾಳ ತಾಲೂಕು ಸಹಾಯಕ ಕೃಷಿ ನಿರ್ದೆಶಕರ ಕಚೇರಿಯಲ್ಲಿ ಕೃಷಿ ಸಹಾಯಕರಾಗಿ ಕರ್ತವ್ಯಕ್ಕೆ ಸೇರ್ಪಡೆಯಾದರು. 1994ರಲ್ಲಿ ಕೃಷಿ ಇಲಾಖೆಯಿಂದ ಉನ್ನತ ವ್ಯಾಸಂಗಕ್ಕೆ ನಿಯೋಜನೆಗೊಂಡು ಧಾರವಾಡದ ಕೃಷಿ ವಿಶ್ವವಿದ್ಯಾನಿಲಯದ ಬಿಜಾಪುರ ಕೃಷಿ ಕಾಲೇಜಿನಲ್ಲಿ ಕೃಷಿ ಪದವಿಯನ್ನು ಪಡೆದಿರುತ್ತಾರೆ. 1998 ರಿಂದ ಮೂರು ವರ್ಷ ಉಡುಪಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ, 2007 ರಿಂದ 4 ವರ್ಷ ಬ್ರಹ್ಮಾವರ ಕೃಷಿ ಪಾಠ ಶಾಲೆಯ ಮುಖ್ಯಸ್ಥರಾಗಿ, 2005 ರಿಂದ ಮಂಗಳೂರು ತಾಲೂಕಿನ ಮೂಡುಬಿದ್ರೆ ಮತ್ತು ಮೂಲ್ಕಿಯಲ್ಲಿ ಕೃಷಿ ಅಧಿಕಾರಿ ಹಾಗೂ ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ ಇವರು ಇದೇ ಅವಧಿಯಲ್ಲಿ ತಿರುಮೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. 2008 ರಲ್ಲಿ ಕರ್ನಾಟಕ ರಾಜ್ಯೋತ್ಸವದಂದು ದ.ಕ.ಜಿಲ್ಲಾ ಮಟ್ಟದ ನಾಗರೀಕ ಸೇವಾ ಪ್ರಶಸ್ತಿಯನ್ನು ಪಡೆದಿರುತ್ತಾರೆ. 2013 ರಲ್ಲಿ ಬಂಟ್ವಾಳ ತಾಲೂಕು ಜಲಾನಯನ ಅಭಿವೃದ್ಧಿ ಅಧಿಕಾರಿಯಾಗಿ, 2014 ರಿಂದ ಬಂಟ್ವಾಳ ತಾಲೂಕಿನಲ್ಲಿ ಕೃಷಿ ಅಧಿಕಾರಿ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ, 2021 ರಿಂದ ಪುತ್ತೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿ ಹಾಗೂ ಸುಳ್ಯ ತಾಲೂಕಿಲ್ಲಿ ಸಹಾಯಕ ಕೃಷಿ ನಿರ್ದೇಶಕರ ಹೆಚ್ಚುವರಿ ಪ್ರಭಾರವನ್ನು ನಿರ್ವಹಿಸಿರುವ ಇವರು ಕೃಷಿ ಇಲಾಖೆಯಲ್ಲಿ 34 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ನಾರಾಯಣ ಶೆಟ್ಟಿ ರವರು ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ಸೌಮ್ಯ ಶೆಟ್ಟಿರವರೊಂದಿಗೆ  ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here