- ಪುತ್ತೂರು ಗಡಿ ಭಾಗದ ಪೆರ್ನಾಜೆಯಲ್ಲಿ ಪುತ್ತೂರು ತಾಲೂಕು ಆಡಳಿತದಿಂದ ಸ್ವಾಗತ
ಪುತ್ತೂರು: ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಅಕ್ಟೋಬರ್‌ನಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಸಂಘಟನ ಚತುರ, ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆಯು ಆಂಧ್ರಪ್ರದೇಶದ ವಿಜಯವಾಡದಿಂದ ಹೊರಟು ಮಂಡ್ಯದ ಆದಿಚುಂಚನಗಿರಿಯ ಮೂಲಕ ಕೊಡಗು ಜಿಲ್ಲೆಯಾಗಿ ದಕ್ಷಿಣ ಕನ್ನಡಕ್ಕೆ ಸಂಪಾಜೆ, ಸುಳ್ಯ ಮಾರ್ಗವಾಗಿ, ಪುತ್ತೂರಿಗೆ ಅಗಮಿಸಿದಾಗ ಪುತ್ತೂರು ತಾಲೂಕಿನ ಗಡಿ ಪೆರ್ನಾಜೆಯಲ್ಲಿ ಭವ್ಯ ಸ್ವಾಗತ ಕಾರ್ಯಕ್ರಮ ನಡೆಯಿತು.
ಮೆರವಣಿಗೆ ಮೂಲಕ ಪುತ್ತೂರು ತಾಲೂಕು ಗಡಿ ಪೆರ್ನಾಜೆಯಲ್ಲಿ ಆಗಮಿಸಿದ ಪ್ರತಿಮೆಗೆ ಪುತ್ತೂರು ತಾಲೂಕು ಆಡಳಿತ ಮತ್ತು ಗೌಡ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಪುಷ್ಪನಮನದ ಮೂಲಕ ಗೌರವ ಸಲ್ಲಿಸಿದರು. ಪ್ರತಿಮೆ ಹೊತ್ತ ವಾಹನದ ಮುಂಭಾಗದಲ್ಲಿ ರಾಮಯ್ಯ ಗೌಡರ ಭಾವಚಿತ್ರದೊಂದಿಗೆ ಅಲಂಕೃತ ಬೆಳ್ಳಿರಥ ಸಾಗುತ್ತಿದ್ದು, ಜನಪ್ರತಿನಿಧಿಗಳು, ಕೆದಂಬಾಡಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಗೌರವ ಸಲ್ಲಿಸಿದರು.
ಸಚಿವ ಎಸ್ ಅಂಗಾರ ಮತ್ತು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಸಹಾಯಕ ಕಮೀಷನರ್ ಗಿರೀಶ್‌ನಂದನ್, ತಹಶೀಲ್ದಾರ್ ನಿಸರ್ಗಪ್ರಿಯ, ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಶ್ರೀ ಮಹಾಲಿಂಗೇಶ್ವರ ಐಟಿಐ ಸಂಚಾಲಕ ಯು.ಪಿ.ರಾಮಕೃಷ್ಣ, ಒಕ್ಕಲಿಗ ಸ್ವಸಹಾಯ ಸಂಘದ ಅಧ್ಯಕ್ಷ ಡಿ.ವಿ.ಮನೋಹರ್, ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ, ಒಕ್ಕಲಿಗ ಮಹಿಳಾ ಗೌಡ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ.ಗೌಡ ಸೇರಿದಂತೆ ಸಂಘದ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪ್ರಮುಖರು ಈ ಸಂದರ್ಭ ಜೊತೆಯಲ್ಲಿದ್ದರು.