ಪುತ್ತೂರು: ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆಯ ಮೆರವಣಿಗೆಯು ಪುತ್ತೂರು ಬೈಪಾಸ್ ದರ್ಬೆಗೆ ತಲುಪುತ್ತಿದ್ದಂತೆ ಪುತ್ತೂರು ನಗರಸಭೆ, ರಾಜಕೀಯ ಪಕ್ಷ, ಜಾತಿ ಸಂಘಟನೆಗಳ ಮತ್ತು ಶಿಕ್ಷಣ ಸಂಸ್ಥೆಗಳ ವತಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ಸದಸ್ಯರು, ಪೌರಾಯುಕ್ತ ಮಧು ಎಸ್ ಮನೋಹರ್, ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಉದ್ಯಮಿ ಸಹಜ್ ರೈ ಬಳಜ್ಜ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನ್ಯಾಯವಾದಿ ವೆಂಕಪ್ಪ ಗೌಡ, ಮಾದವ ಗೌಡ ಕಾಮಧೇನು, ಎಸ್.ಆರ್.ಕೆ. ಲ್ಯಾಡರ್ಸ್ನ ಮಾಲಕ ಕೇಶವ ಎ, ಹಲವಾರು ಮಂದಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಮಾಲಾರ್ಪಣೆ ಪುಷ್ಪಾರ್ಚಣೆ ಮಾಡಲಾಯಿತು. ಬಳಿಕ ಅವರೆಲ್ಲ ಮೆರವಣಿಗೆ ಜೊತೆ ಸಾಗಿದರು.