ಪುತ್ತೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ, ಮಂಗಳೂರು ಮಹಾನಗರ ಪಾಲಿಕೆ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ವಾರಕ ಉಸ್ತುವಾರಿ ಸಮಿತಿ ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪನೆಗೊಳ್ಳುತ್ತಿರುವ ಸಂಘಟನಾ ಚತುರ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆಗೆ ಕುಂಬ್ರ ಜಂಕ್ಷನ್‌ನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.
ಪ್ರತಿಮೆಗೆ ದೀಪ ಬೆಳಗಿಸಿ , ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಲಾಯಿತು. ಕೆದಂಬಾಡಿ ಶ್ರೀರಾಮ ಮಂದಿರದ ಮಾಜಿ ಅಧ್ಯಕ್ಷರಾದ ಇದ್ಯಪೆ ಶಿವರಾಮ ಗೌಡರವರು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕೆದಂಬಾಡಿ ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ, ಕುಂಬ್ರ ಶ್ರೀರಾಮ ಮಂದಿರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ನಿತೀಶ್ ಕುಮಾರ್ ಶಾಂತಿವನ, ಒಳಮೊಗ್ರು ಗ್ರಾಪಂ ಮಾಜಿ ಸದಸ್ಯೆ ಉಷಾ ನಾರಾಯಣ್, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ, ತಾಪಂ ಮಾಜಿ ಸದಸ್ಯ ಹರೀಶ್ ಬಿಜತ್ರೆ, ಶಿಕ್ಷಕ ವಿಶ್ವನಾಥ ಗೌಡ ಬೊಳ್ಳಾಡಿ, ಮುಂಡೂರು ಗ್ರಾಪಂ ಸದಸ್ಯ ಕರುಣಾಕರ ಗೌಡ ಎಲಿಯ, ಒಳಮೊಗ್ರು ಗ್ರಾಪಂ ಸದಸ್ಯ ವಿನೋದ್ ಶೆಟ್ಟಿ ಮುಡಾಲ, ಶಿವರಾಮ ಗೌಡ ಬೊಳ್ಳಾಡಿ, ಸುಂದರ ಗೌಡ, ಅಶೋಕ್ ಪೂಜಾರಿ, ಸೀತಾರಾಮ ಗೌಡ ಇದ್ಯಪೆ ಸೇರಿದಂತೆ ನೂರಾರು ಮಂದಿ ಗ್ರಾಮಸ್ಥರು ಭಾಗವಹಿಸಿದ್ದರು.
ಶಾಲಾ ವಿದ್ಯಾರ್ಥಿಗಳಿಂದ ಜೈಕಾರ
ವಿಶೇಷವಾಗಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತು ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಸ್ವಾಗತಿಸಿದರು. ಸ್ವಾತಂತ್ರ್ಯ ಸಮರವೀರ ರಾಮಯ್ಯ ಗೌಡರಿಗೆ ಜೈಕಾರ ಕೂಗುವ ಮೂಲಕ ಸ್ವಾಗತಿಸಲಾಯಿತು.