ಇಚ್ಲಂಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ದಶಮಾನೋತ್ಸವ ಸಂಭ್ರಮ; ಆ.31: ಬೆಳಿಗ್ಗೆ ಗಣಪತಿ ವಿಗ್ರಹ ಪ್ರತಿಷ್ಠೆ, ಸಂಜೆ ಶೋಭಾಯಾತ್ರೆ

0

ನೆಲ್ಯಾಡಿ: ಇಚ್ಲಂಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಇಚ್ಲಂಪಾಡಿ ನೇರ್ಲ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಸಹಭಾಗಿತ್ವದಲ್ಲಿ ನೇರ್ಲ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಈ ವರ್ಷ ದಶಮಾನೋತ್ಸವ ಸಂಭ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಆ.31 ಹಾಗೂ 31ರಂದು ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಆ.30ರಂದು ಸಂಜೆ ಶ್ರೀ ಗಣಪತಿ ದೇವರ ವಿಗ್ರಹ ನೇರ್ಲ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರಕ್ಕೆ ಆಗಮಿಸಲಿದೆ. ಗೌರಿ ಹಬ್ಬದ ಪ್ರಯುಕ್ತ ರಾತ್ರಿ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ನೇರ್ಲ ಸರಕಾರಿ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ, ಬಳಿಕ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ಆ.31ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ಗಣಹೋಮ ನಡೆಯಲಿದೆ. ಬೆಳಿಗ್ಗೆ 7.32ರ ಸಿಂಹ ಲಗ್ನದಲ್ಲಿ ಶ್ರೀ ಗಣಪತಿ ದೇವರ ಪ್ರತಿಷ್ಠೆ ನಡೆಯಲಿದೆ. ನಂತರ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 10.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಶುಭಾಕರ ಹೆಗ್ಗಡೆ, ಇಚ್ಲಂಪಾಡಿ ನೇರ್ಲ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಅಧ್ಯಕ್ಷ ಕೇಶವ ಗೌಡ ಅಲೆಕ್ಕಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಇಚ್ಲಂಪಾಡಿ ಒಕ್ಕೂಟದ ಅಧ್ಯಕ್ಷ ಅನಿಲ್‌ಕುಮಾರ್ ಕಟ್ಟತ್ತಂಡ, ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಜಾಣಪ್ಪ ಪೂಜಾರಿ, ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ದೇವಕಿ ಕುಡಾಲ, ಇಚ್ಲಂಪಾಡಿ ಕಡೆಂಬೇಲು ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷ ತನಿಯಪ್ಪ ಮೊಂಟೆತ್ತಡ್ಕ, ಇಚ್ಲಂಪಾಡಿ ಶಂಖದ್ವೀಪ ಗೌರಿ ಶಂಕರ ಭಜನಾ ಮಂಡಳಿ ಅಧ್ಯಕ್ಷೆ ರಾಜಮ್ಮ ಚಂದ್ರಶೇಖರ ನಾಯರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಶ್ರೀದೇವರ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ ೩.೦೦ರಿಂದ ಶ್ರೀ ಮಹಾಗಣಪತಿ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ. ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಹರೀಶ್ ಭಟ್‌ರವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಭಾಸ್ಕರ ಎಸ್.ಗೌಡ ಒಡ್ಯೆತ್ತಡ್ಕ, ಕಾರ್ಯದರ್ಶಿ ಹರೀಶ್ ಶೆಟ್ಟಿ ನೇರ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here