








ಪುತ್ತೂರು: ಮಂಗಳೂರಿನಲ್ಲಿ ಸೆ.2ರಂದು ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಿ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳನ್ನು ನಿಯೋಜಿಸಬೇಕಾಗಿದೆ.





ಸದರಿ ದಿನ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಬಸ್ಸುಗಳು ಓಡಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ವಿಭಾಗೀಯ ನಿಯಂತ್ರಣಾಽಕಾರಿ ಜಯಕರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








