ಬೆಟ್ಟಂಪಾಡಿ: 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆ. 31 ಕ್ಕೆ ಚಾಲನೆ ದೊರೆಯಿತು. ಬೆಳಿಗ್ಗೆ ಶ್ರೀ ಗಣೇಶ ಸ್ವಾಮಿಯ ವಿಗ್ರಹ ಪ್ರತಿಷ್ಠೆಯಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ ಸುಬ್ಬಣ್ಣ ಗೌಡ ಪಾರ ದೀಪ ಬೆಳಗಿಸಿ ಉದ್ಘಾಟಿಸಿದರು‌. ಭಗವಾಧ್ವಜ ಸ್ಥಾಪಿಸಿ, ಲೋಕಮಾನ್ಯ ಬಾಲಗಂಗಾಧರ ತಿಲಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ರಾಜೇಶ್ ಭಟ್ ಪುತ್ತೂರುರವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಬಳಿಕ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here