ಮಂಗಳೂರಿಗೆ ಪ್ರಧಾನಿ ಭೇಟಿ ಕಾರ್ಯಕ್ರಮಕ್ಕೆಜಿಲ್ಲಾಡಳಿತದಿಂದ ಪೂರ್ವಸಿದ್ಧತೆ ಪೂರ್ಣ-ಡಿಸಿ

0

  • ಫಲಾನುಭವಿಗಳ ಸಹಿತಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆ
  • ಪೊಲೀಸರಿಂದ ಬಿಗಿ ಬಂದೋಬಸ್ತ್
  • ಸಂಸದರ, ಕಾರ್ಯಕ್ರಮದ ಅಪಪ್ರಚಾರನಡೆಸುತ್ತಿರುವವರ ಮೇಲೆ ಪೊಲೀಸ್ ನಿಗಾ

ಮಂಗಳೂರು: ಸೆ.2ರಂದು ಮಂಗಳೂರುಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಸರ್ಕಾರ, ನವ ಮಂಗಳೂರು ಬಂದರು ಪ್ರಾಧಿಕಾರ, ಎಂಆರ್‌ಪಿಎಲ್, ಸಂಬಂಧಪಟ್ಟ ಇಲಾಖೆಗಳು ಎಲ್ಲರೂ ಸೇರಿ ಕಾರ್ಯಕ್ರಮದ ಸಿದ್ಧತೆ ಕಾರ್ಯ ಮಾಡುತ್ತಿದ್ದಾರೆ.ಸೆ.2ರಂದು ಪ್ರಧಾನಮಂತ್ರಿ ಮೋದಿಯವರು ನೇರವಾಗಿ ಎನ್‌ಎಂಪಿಎಗೆ ಬಂದು, ಅಲ್ಲಿ ಆರು ಯೋಜನೆಗಳ ಶಂಕುಸ್ಥಾಪನೆ ನಡೆಸುವರು. ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಜನರು ಮುಂಚಿತವಾಗಿ ಸಭಾ ಮೈದಾನಕ್ಕೆ ಬರಬೇಕು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿದರು.ಫಲಾನುಭವಿಗಳಿಗೆ ಕಡ್ಡಾಯವಾಗಿ ಭಾಗವಹಿಸಲು ನಿರ್ದೇಶನ ನೀಡಿಲ್ಲ, ಮನವಿ ಮಾಡಲಾಗಿದೆ ಅಷ್ಟೆ ಎಂದು ಅವರು ಹೇಳಿದರು.
ಬಿಗಿ ಪೊಲೀಸ್ ಬಂದೋಬಸ್ತ್:
ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿ, ಪ್ರಧಾನಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದ್ದು, ಸಿಎಆರ್, ಕೆಎಸ್‌ಆರ್‌ಪಿ, ಹೋಮ್‌ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ ಎಂದರು.
ಕಮಿಷನರೇಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗುತ್ತದೆ. 15 ಕಡೆಗಳಲ್ಲಿ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಬಗ್ಗೆ ಅಪಪ್ರಚಾರನಡೆಸುತ್ತಿರುವವರ ಮೇಲೆ ನಿಗಾ:
ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ.ಈಗಾಗಲೇ ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here