ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸವಣೂರು, ಪ್ರೌಢಶಾಲಾ ವಿಭಾಗದ ಸಹಯೋಗದೊಂದಿಗೆ 2022ನೇ ಸಾಲಿನ ಪ್ರೌಢಶಾಲಾ ತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕ್ರೀಡಾಂಗಣದಲ್ಲಿ ನಡೆಯಿತು.
ಪಂದ್ಯಾಟವನ್ನು ಉದ್ಘಾಟಿಸಿದ ಸವಣೂರು ವಿದ್ಯಾರಶ್ಮಿಯ ಸಂಚಾಲಕರು, ಸಹಕಾರಿ ರತ್ನ ಪುರಸ್ಕೃತ ಸೀತಾರಾಮ ರೈರವರು ಮಾತನಾಡಿ, ಕ್ರೀಡೆಯ ಅಗತ್ಯತೆಯ ಬಗ್ಗೆ ಹಾಗೂ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ತಾವು ನೀಡಿದ ಹಾಗೂ ಹಿರಿಯರು ನೀಡಿದ ಕೊಡುಗೆಯನ್ನು ನೆನಪಿಸಿಕೊಂಡರು. ಕ್ರೀಡೆಯ ಬಗ್ಗೆ ತನ್ನ ಕೈಲಾದಷ್ಟು ಸಹಾಯವನ್ನು ನೀಡುವುದಾಗಿ ಭರವಸೆ ನೀಡಿ ಮಕ್ಕಳಿಗೆ ಶುಭ ಹಾರೈಸಿದರು.
ಸವಣೂರಿನ ಗ್ರಾ.ಪಂ ಅಧ್ಯಕ್ಷ ಶ್ರೀಮತಿ ರಾಜೀವಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರಾದ ಅಬ್ದುಲ್ ರಫೀಕ್, ಅಬ್ದುಲ್ ರಜಾಕ್, ತೀರ್ಥರಾಮ, ಇಂದಿರಾ ಬೇರಿಕೆ, ಬಾಬು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪದ್ಮಾವತಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡಬ ತಾಲೂಕಿನ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಾಂತರಾಮ ಓಡ್ಲ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜೇಶ್ವರಿ, ಅಕ್ಷಯ ಕಾಲೇಜಿನ ಸಂಚಾಲಕರಾದ ಜಯಂತ ನಡುಬೈಲು, ಸಿ.ಆರ್.ಪಿ ಕುಶಾಲಪ್ಪ ಗೌಡ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮನ್ಮಥ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಗ್ರೇಡ್ ೧ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೀತಾರಾಮ್ ಗೌಡ ಹಿರೇಬಂಡಾಡಿ, ಸವಣೂರು ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಮಾಲೆತ್ತಾರು, ಕಾರ್ಯದರ್ಶಿ ಜೀತಾಕ್ಷ, ದಯಾನಂದ ಮಾಲೆತ್ತಾರು, ಪ್ರಮೋದ್ ಉಪಸ್ಥಿತರಿದ್ದರು.
ಸನ್ಮಾನ:
ಎಸ್.ಎಸ್.ಎಲ್.ಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಚೇತನಾ ಪಿ, ದೀಪ್ತಿ ಕೆ, ಅಂಕಿತಾ ಎನ್, ತೇಜಸ್ವಿ, ಫಾತಿಮತ್ ಸಫ್ರೀನಾ ಎಂ. ಎಚ್., ಫಾತಿಮತ್ ಸಫ್ರೀನಾ, ಫಾತಿಮತ್ ರಿಝಾ, ಅಶ್ವಿತಾ ಜೆ, ಗಾಯತ್ರಿ ಇವರನ್ನು ಸಂಸ್ಥೆಯ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಸಾಧಕರಾದ ಸವಣೂರು ಶಿಲ್ಪಿ ಸೀತಾರಾಮ ರೈ, ಕೊಡುಗೈ ದಾನಿ ಪಿ.ಡಿ.ಕೃಷ್ಣ ಕುಮಾರ್ ರೈ, ನಿವೃತ್ತ ಪ್ರಾಂಶುಪಾಲರಾದ ಬಿ.ವಿ. ಸೂರ್ಯ ನಾರಾಯಣ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕಿ ಗೀತಾಮಣಿ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಏನೆಕಲ್, ರಾಜ್ಯ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ಶೋಭಾ ಏನೇಕಲ್, ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ, ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಪಟ್ಟೆ, ಗಿರಿಶಂಕರ ಸುಲಾಯ, ರಾಕೇಶ್ ರೈ ಕೆಡೆಂಜಿ, ಸುರೇಶ್ ರೈ ಸೂಡಿಮುಳ್ಳು, ಅಂತರಾಷ್ಟ್ರೀಯ ಕ್ರೀಡಾಪಟು ಪೂರ್ಣಿಮಾ, ಕ್ರೀಡಾಂಗಣ ನಿರ್ಮಾಣಕ್ಕೆ ಸಹಕರಿಸಿದ ಇಸ್ಮಾಯಿಲ್, ಸರ್ಕಾರಿ ನೌಕರರ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕರುಗಳಾದ ಶ್ರೀಮತಿ ರೀನಾ ಎಂ. ಡಿ., ಶ್ರೀಮತಿ ನಯನಾ ಜಿ ಪಾಲೇಕರ್, ಶ್ರೀಮತಿ ಸರಸ್ವತಿ ಎ., ಪಂದ್ಯಾಟ ಕ್ಲಪ್ತ ಸಮಯಕ್ಕೆ ಮುಕ್ತಾಯಗೊಳ್ಳಲು ಕಾರಣರಾದ ದೈಹಿಕ ಶಿಕ್ಷಣ ಶಿಕ್ಷಕರಾದ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್, ಕಾರ್ಯಕ್ರಮ ನಿರೂಪಣೆ ಮಾಡಿದ ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಬಾಲಕೃಷ್ಣ ಪೊರ್ದಾಲ್‌ರರವರನ್ನು ಗೌರವಿಸಿ ಸನ್ಮಾನಿಸಲಾಯಿತು.
ರೋಟರಿ ಸಿಟಿಯಿಂದ ಐಡಿ ಕಾರ್ಡ್ ವಿತರಣೆ:
ಸರ್ಕಾರಿ ಪದವಿ ಪೂರ್ವ ಪ್ರೌಢಶಾಲೆ ವಿಭಾಗದ ೧೫೮ ವಿದ್ಯಾರ್ಥಿಗಳಿಗೆ ಐಡಿ ಕಾರ್ಡಿನ ಪ್ರಾಯೋಜಕರಾಗಿ ಸಹಕರಿಸಿದ ರೋಟರಿ ಸಿಟಿ ಅಧ್ಯಕ್ಷರಾದ ಪ್ರಶಾಂತ್ ಶೆಣೈರವರನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಐದು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಐಡಿ ಕಾರ್ಡನ್ನು ನೀಡಲಾಯಿತು. ರೋಟರಿ ವಲಯ ೪ರ ವಲಯ ಸೇನಾನಿ ಪ್ರಮೋದ್ ಮಲ್ಲಾರ, ಕೋಶಾಧಿಕಾರಿ ಕಿರಣ್ ಬಿ.ವಿ. ಉಪಸ್ಥಿತರಿದ್ದರು.
ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರೌಢಶಾಲೆ ವಿಭಾಗದ ಹಿರಿಯ ಪದವೀಧರ ಶಿಕ್ಷಕ ರಘು ಬಿ.ಆರ್. ಸ್ವಾಗತಿಸಿದರು. ಉಪನ್ಯಾಸಕರಾದ ರಾಜೀವ್ ಶೆಟ್ಟಿ, ರಾಜಶೇಖರ್, ನಾಗೇಶ್, ಮಮತಾ, ಶಶಿಕಲಾ, ಚಿತ್ರಾ, ಅಶ್ವಿನಿ, ಕವಿತಾ, ದಿವ್ಯಾ, ರೇಖಾ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಬಿ.ವಿ.ಕಿಶನ್ ಮತ್ತು ಲಿಟ್ಲ್ ಫ್ಲವರ್ ಶಾಲೆಯ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಛನ್ ಎಂ. ವಂದಿಸಿದರು.
ಇಂದ್ರಪ್ರಸ್ಥ ಉಪ್ಪಿನಂಗಡಿ, ಬೆಥನಿ ಪಾಂಗ್ಲಾಯಿ ಅಗ್ರಸ್ಥಾನ..
ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ, ದ್ವಿತೀಯ ಸ್ಥಾನವನ್ನು ಬೆಥನಿ ಪ್ರೌಢಶಾಲೆ ಪಾಂಗಳಾಯಿ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬೆಥನಿ ಪ್ರೌಢಶಾಲೆ ಪಾಂಗಳಾಯಿ, ದ್ವಿತೀಯ ಸ್ಥಾನವನ್ನು ಸಂತ ಅಂತೋನಿ ಪ್ರೌಢಶಾಲೆ ಉದನೆ ಪಡೆಯಿತು. ಪಂದ್ಯಾಟದಲ್ಲಿ ಸುಮಾರು ೫೮ ಬಾಲಕ ಬಾಲಕಿಯರ ತಂಡಗಳು ಭಾಗವಹಿಸಿ ಎಲ್ಲಾ ತಂಡಗಳಿಗೂ ಸಂಸ್ಥೆಯ ಪರವಾಗಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.