ಸೆ.2: ತ್ಯಾಗರಾಜನಗರದಲ್ಲಿ 20ನೇ ವಾರ್ಷಿಕ ಸಮಾರಂಭ, ಗಣಪತಿ ಹವನ

0

ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿರುವ ಹಿಂದೂ ಜಾಗರಣ ವೇದಿಕೆ ತ್ಯಾಗರಾಜನಗರ ಇದರ ವತಿಯಿಂದ ನಡೆಯುವ 20 ನೇ ವಾರ್ಷಿಕ ಸಮಾರಂಭ ಮತ್ತು ಸಾಮೂಹಿಕ ಗಣಪತಿಹವನ ಸೆ.02ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತ್ಯಾಗರಾಜನಗರದಲ್ಲಿರುವ ಗಣಪತಿ ಕಟ್ಟೆಯಲ್ಲಿ ನಡೆಯಲಿದೆ.

ಬೆಳಿಗ್ಗೆ ಸಾಮೂಹಿಕ ಶ್ರೀ ಗಣಪತಿಹವನ ಆರಂಭಗೊಂಡು ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಕೆದಂಬಾಡಿ ಮತ್ತು ಅರಿಯಡ್ಕ ಗ್ರಾಮ ವ್ಯಾಪ್ತಿಯ ಅಂಗನವಾಡಿ ಶಾಲಾ ಮಕ್ಕಳಿಗೆ, ಪ್ರಾಥಮಿಕ, ಪ್ರೌಢ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಬಹುಮಾನ ವಿತರಣೆ ನಡೆಯಲಿದ್ದು ಸುನಿಲ್ ತ್ಯಾಗರಾಜನಗರ ಅಧ್ಯಕ್ಷತೆ ವಹಿಸಲಿದ್ದು, ಹಿಂಜಾವೇ ಸವಣೂರು ಇದರ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ರೈ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ತಿಂಗಳಾಡಿ ಶ್ರೀ ದೇವತಾ ಭಜನಾ ಮಂದಿರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣೇಶನ ಶೋಭಾಯಾತ್ರೆಯನ್ನು ಬರಮಾಡಿಕೊಳ್ಳುವ ಕಾರ್ಯಕ್ರಮ, ಹಣ್ಣುಕಾಯಿ ಸಮರ್ಪಣೆ, ಮಂಗಳಾರತಿ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತ್ಯಾಗರಾಜನಗರ ಹಿಂಜಾವೇ ಸಂಯೋಜಕ ಸುನಿಲ್ ತ್ಯಾಗರಾಜನಗರ, ಕೇಶವ ಸ್ವಾಮಿನಗರ ಸಹಸಂಯೋಜಕ, ಪ್ರವೀಣ್ ಪಾಪೆಮಜಲು ಸಹ ಸಂಯೋಕ ಹಾಗೂ ಸರ್ವ ಸದಸ್ಯರುಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here