ಕಡಬ: ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುವ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ತೆರಳುವ ಸಾರ್ವಜನಿಕರ ಮಾಹಿತಿಯನ್ನು ಸಂಗ್ರಹಿಸಲು ಗ್ರಾಮವಾರು ನೋಡೆಲ್ ಅಧಿಕಾರಿಗಳನ್ನು ನೇಮಿಸಿ ಕಡಬ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಸುಬ್ರಹ್ಮಣ್ಯ, ಬಿಳಿನೆಲೆ, ಐತ್ತೂರು, ಮರ್ದಾಳ ಗ್ರಾ.ಪಂ.ಗಳಿಗೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರು. ಗೋಳಿತೊಟ್ಟು, ನೆಲ್ಯಾಡಿ, ಕೌಕ್ರಾಡಿ, ಶಿರಾಡಿ ಗ್ರಾ.ಪಂ.ಗಳಿಗೆ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಕಡಬ, ಕುಟ್ರುಪಾಡಿ, ಪೆರಾಬೆ, ಆಲಂಕಾರು, ರಾಮಕುಂಜ, ಕೊಯಿಲ ಗ್ರಾ.ಪಂ. ವ್ಯಾಪ್ತಿಗೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ಕಾಣಿಯೂರು, ಸವಣೂರು, ಬೆಳಂದೂರು, ಬಳ್ಪ, ಎಡಮಂಗಲ ಗ್ರಾ.ಪಂ. ವ್ಯಾಪ್ತಿಗೆ ಕಡಬ ತಾಲೂಕು ಪಂಚಾಯತ್ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕರು, ಕೊಣಾಜೆ, ಕೊಂಬಾರು, ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಗೆ ಕಡಬ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರರು ಅವರುಗಳನ್ನು ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಿ ಕಡಬ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಪ್ರತಿ ಗ್ರಾ.ಪಂ. ವ್ಯಾಪ್ತಿಯಿಂದ ಹೊರಡುವ ಸಾರ್ವಜನಿಕರ ಸಂಖ್ಯೆಯ ಮಾಹಿತಿಯನ್ನು ಗ್ರಾ.ಪಂ. ಅಭಿವೃದ್ದಿ ಅಧಿಕಾರಿಗಳು ಮತ್ತು ಗ್ರಾಮಕರಣಿಕರು ಸಂಗ್ರಹಿಸಿ ನೋಡೆಲ್ ಅಧಿಕಾರಿಗಳಿಗೆ ವರದಿ ನೀಡಲಿದ್ದಾರೆ.