ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಹಿನ್ನೆಲೆ ಪ್ರಯಾಣಿಕರಿಗೆ ಬಸ್ ಕೊರತೆ

0

ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು

ಮೋದಿ ಕಾರ್ಯಕ್ರಮಕ್ಕೆ ಹೋಗುವ ಬಸ್‌ನಲ್ಲೇ ವಿದ್ಯಾರ್ಥಿಗಳನ್ನು ಶಾಲಾ, ಕಾಲೇಜುಗಳಿಗೆ ಬಿಟ್ಟ ಬಿಜೆಪಿ ಕಾರ್ಯಕರ್ತರು

ಪುತ್ತೂರು: ಸರ್ಕಾರದ ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆ.2ರಂದು ಮಂಗಳೂರಿಗೆ ಆಗಮಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ಫಲಾನುಭವಿಗಳು ಮಂಗಳೂರಿಗೆ ಕರೆದೊಯ್ಯಲು ತೆರಳಿದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಬಸ್‌ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಯಾಣಿಕರು ಬಸ್‌ಗಾಗಿ ಕಾದು ಕೂತಿರುವ ದೃಶ್ಯ ಕಂಡು ಬಂದಿದೆ.

ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕೇರಳದ ಬಸ್ ಮಾತ್ರ ಓಡಾಟ ನಡೆಸುತ್ತಿದ್ದು ಉಳಿದಂತೆ ಕೆಎಸ್ಸಾರ್ಟಿಸಿ ಬಸ್‌ಗಳಿಲ್ಲದೆ ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಿದ್ದಾರೆ.
ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶದಲ್ಲಿ ಮೋದಿ ಮಾತನಾಡನಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಫಲಾನುಭವಿಗಳು ಕಾರ್ಯಕ್ರಮಕ್ಕೆ ಭಾಗವಹಿಸಲು ಸರಕಾರಿ ಬಸ್‌ಗಳನ್ನು ಅವಲಂಬಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪುತ್ತೂರು ಬಸ್ ನಿಲ್ದಾಣದಲ್ಲಿ ಕೇರಳ ರಾಜ್ಯದ ಒಂದು ಬಸ್ ಮಾತ್ರ ನಿಂತಿದ್ದು, ಕರ್ನಾಟಕ ರಾಜ್ಯದ ಯಾವುದೇ ಬಸ್‌ಗಳಿರಲಿಲ್ಲ.

ಮೋದಿ ಕಾರ್ಯಕ್ರಮದ ಜೊತೆಯಲ್ಲೇ ವಿದ್ಯಾರ್ಥಿಗಳನ್ನು ಶಾಲಾ, ಕಾಲೇಜಿಗೆ ಬಿಟ್ಟು ಹೋದ ಬಸ್‌ಗಳು:
ವಿದ್ಯಾರ್ಥಿಗಳನ್ನು ಶಾಲಾ, ಕಾಲೇಜುಗಳಿಗೆ ಬಿಟ್ಟ ಬಿಜೆಪಿ ಕಾರ್ಯಕರ್ತರು:
ಮೋದಿ ಕಾರ್ಯಕ್ರಮಕ್ಕೆ ಹೋಗುವ ಬಸ್‌ನಲ್ಲೇ ದಾರಿಯಲ್ಲಿ ಕೆಲವೊಂದು ವಿದ್ಯಾರ್ಥಿಗಳನ್ನು ಬಿಜೆಪಿ ಕಾರ್ಯಕರ್ತರು ಬಸ್‌ಗೆ ಹತ್ತಿಸಿ ಸಂಬಂಧಪಟ್ಟ ಶಾಲಾ, ಕಾಲೇಜುಗಳಿಗೆ ಬಿಟ್ಟು ಮಂಗಳೂರಿಗೆ ತೆರಳಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here