ಮಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

0

  • ಪುತ್ತೂರು ನಗರಸಭಾ ವ್ಯಾಪ್ತಿಯಿಂದ ಮಂಗಳೂರಿಗೆ ತೆರಳಿದ ಬಿಜೆಪಿ ಕಾರ್ಯಕರ್ತರು

ಪುತ್ತೂರು: ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಕಾರ್ಯಕರ್ತರು ಮತ್ತು ಫಲಾನುಭವಿಗಳು ಸೇರಿ ಒಟ್ಟು 285 ಬಸ್‌ಗಳು ಮಂಗಳೂರಿಗೆ ತೆರಳಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಗೆ ಸಂಬಂಧಿಸಿ ಬೆಳಿಗ್ಗೆ ಪುತ್ತೂರು ತೆಂಕಿಲದಿಂದ 24 ಬಸ್‌ಗಳಲ್ಲಿ ಕಾರ್ಯಕರ್ತರು ಮಂಗಳೂರಿಗೆ ತೆರಳಿದ್ದಾರೆ.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರ ನೇತೃತ್ವದಲ್ಲಿ ಮತ್ತು ಇತರ ಪ್ರಮುಖರು ನಗರಸಭೆ ವ್ಯಾಪ್ತಿಯ ವಾರ್ಡ್ ಮತ್ತು ಬೂತ್ ಸಮಿತಿಗಳ ಮೂಲಕ ಕಾರ್ಯಕರ್ತರನ್ನು ಸೇರಿಸಿ ಕೊಂಡು ಮಂಗಳೂರಿಗೆ ತೆರಳಿದ್ದಾರೆ.

LEAVE A REPLY

Please enter your comment!
Please enter your name here