ಸೆ.4:ಡೊನ್ ಬೊಸ್ಕೊ ಕ್ಲಬ್‌ನಿಂದ ಪ್ರತಿಭಾ ಪುರಸ್ಕಾರ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಡೊನ್ ಬೊಸ್ಕೊ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಬೆಂಬಲಿಸುವ ‘ಪ್ರತಿಭಾ ಪುರಸ್ಕಾರ-2022’ ಕಾರ್ಯಕ್ರಮವು ಸೆ.4ರಂದು ಮಾಯಿದೆ ದೇವುಸ್ ಚರ್ಚ್ ಸಭಾಭವನದಲ್ಲಿ ಪೂರ್ವಾಹ್ನ ನಡೆಯಲಿದೆ.

ಮುಖ್ಯ ಅತಿಥಿಯಾಗಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಸ್ಟ್ಯಾನಿ ಪಿಂಟೋ, ಗೌರವ ಉಪಸ್ಥಿತಿಯಾಗಿ ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ಭಾಗವಹಿಸಲಿರುವರು. ಅಧ್ಯಕ್ಷತೆಯನ್ನು ಡೊನ್ ಬೊಸ್ಕೊ ಕ್ಲಬ್ ಅಧ್ಯಕ್ಷ ಫೆಬಿಯನ್ ಗೋವಿಯಸ್‌ರವರು ವಹಿಸಲಿದ್ದಾರೆ ಎಂದು ಡೊನ್ ಬೊಸ್ಕೊ ಕ್ಲಬ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here