ಪಿಯು ಕಾಲೇಜುಗಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ; ಫಿಲೋಮಿನಾ ಪಿಯು ಕಾಲೇಜಿನ ತೃಪ್ತಿ ರಾಜ್ಯಮಟ್ಟಕ್ಕೆ

0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ ಹಾಗೂ ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಜರಗಿದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ-2022 ಇದರಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ದರ್ಬೆ ಫಿಲೋನಗರದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತೃಪ್ತಿ ಎನ್.ರವರು ಚಾಂಪಿಯನ್ ಎನಿಸಿಕೊಂಡಿದ್ದು, ಹಾವೇರಿಯಲ್ಲಿ ಜರಗುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಈ ಹಿಂದೆ ಎಂಟನೇ ವರ್ಷದ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಹಾವೇರಿಯಲ್ಲಿ ಆನ್‌ಲೈನ್ ಮೂಲಕ ಜರಗಿದ, ಝೂಮ್ ಆಪ್ ಮುಖೇನ ನೇರಪ್ರಸಾರ ಹೊಂದಲಾದ ೩ನೇ ಕರ್ನಾಟಕ ರಾಜ್ಯ ಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್-೨೦೨೨ ಸ್ಪರ್ಧೆಯಲ್ಲಿ ವಯೋಮಿತಿ 15-20 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ತೃಪ್ತಿ ಎನ್‌ರವರು ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಮಾಡಾವು ನಿವಾಸಿ ಐತ್ತಪ್ಪ ನಾಯ್ಕ್ ಹಾಗೂ ಪದ್ಮಲ ಕುಮಾರಿ ದಂಪತಿ ಪುತ್ರಿಯಾಗಿರುವ ತೃಪ್ತಿ ಎನ್‌ರವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಸಾಂದೀಪನಿ ಶಾಲೆಯಲ್ಲಿ ಪೂರೈಸಿರುತ್ತಾರೆ. ತೃಪ್ತಿ ಎನ್.ರವರು ಬೆಂಗಳೂರು ಕುಂಡಲಿನಿ ಯೋಗ ಶಾಲೆಯವರು ಹಮ್ಮಿಕೊಂಡ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ, ಯೋಗಾಸನ ಸ್ಪೋರ್ಟ್ಸ್ ಫೆಡರೇಶನ್‌ರವರು ಆಯೋಜಿಸಿದ ಸ್ಪರ್ಧೆಯಲ್ಲಿ ಪ್ರಥಮ ಹೀಗೆ ಹಲವಾರು ಸ್ಪರ್ಧೆಗಳಲ್ಲಿ ತೃಪ್ತಿರವರು ಭಾಗವಹಿಸಿ ಅನೇಕ ಪದಕಗಳನ್ನು ಪಡೆದಿರುತ್ತಾರೆ. ಇವರಿಗೆ ನವೀನ್ ಕುಮಾರ್ ಕೆಯ್ಯೂರುರವರು ತರಬೇತುದಾರರಾಗಿ ತರಬೇತಿ ನೀಡಿರುತ್ತಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here