ಸಾಮಾಜಿಕ ಅರಣ್ಯ ವಲಯಾಧಿಕಾರಿಗಳ ನೂತನ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ

0

4 ತಿಂಗಳೊಳಗೆ ಉದ್ಘಾಟನೆಗೂ ಸಿದ್ದಗೊಳ್ಳಲಿದೆ – ಸಂಜೀವ ಮಠಂದೂರು

ಪುತ್ತೂರು: ದರ್ಬೆಯಲ್ಲಿರುವ ಇಲಾಖೆಗಳಿಗೆ ಸಂಬಂಧಿಸಿದ ಕಚೇರಿಗಳಿರುವ ಜಾಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಾಮಾಜಿಕ ಅರಣ್ಯ ವಲಯಾಧಿಕಾರಿಗಳ ಕಚೇರಿ ಕಟ್ಟಡ ಕಾಮಗಾರಿ 4 ತಿಂಗಳೊಳಗೆ ಪೂರ್ಣಗೊಂಡು ಉದ್ಘಾಟನೆಗೆ ಸಿದ್ದಗೊಳ್ಳಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ದರ್ಬೆ ಸಿಟಿಒ ರಸ್ತೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಾಮಾಜಿಕ ಅರಣ್ಯ ವಲಯಾಧಿಕಾರಿಗಳ ಕಚೇರಿ ಕಟ್ಟಡದ ಶಿಲಾನ್ಯಾಸವನ್ನು ಅವರು ಸೆ.೩3ರಂದು ನೆರವೇರಿಸಿ ಬಳಿಕ ಮಾತನಾಡಿದರು. ರೂ. 22 ಲಕ್ಷ ಅನುದಾನದಲ್ಲಿ ಕಟ್ಟಡ ಪೂರ್ಣಗೊಳ್ಳಲಿದೆ. ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಲಿದೆ. ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಒಟ್ಟಿನಲ್ಲಿ ಸಾಮಾಜಿಕ ಅರಣ್ಯ ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಈ ಭವನದ ಮೂಲಕ ಅನೇಕ ಕಾರ್ಯಕ್ರಮ ಅನುಷ್ಠಾನಗೊಳ್ಳಲಿ ಎಂದು ಹಾರೈಸಿದರು. ಸಾಮಾಜಿಕ ಅರಣ್ಯ ವಲಯಾಧಿಕಾರಿ ವಿದ್ಯಾರಾಣಿ ಸ್ವಾಗತಿಸಿ, ನೂತನ ನಿಮಾಣಗೊಳ್ಳಲಿರುವ ನೂತನ ಕಟ್ಟಡದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಉಪವಲಯ ಅರಣ್ಯಸಂರಕ್ಷಣಾಧಿಕಾರಿ ಸುಬ್ಬಯ್ಯ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜಾರಾಮ್, ಸಹಾಯಕ ನಿರ್ವಾಹಕ ಇಂಜಿನಿಯರ್ ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು. ಬೆಳಿಗ್ಗೆ ವೈದಿಕರಿಂದ ಭೂಮಿ ಪೂಜೆ ನೆರವೇರಿತು. ಶಾಸಕ ಸಂಜೀವ ಮಠಂದೂರು ಅವರು ಭೂಮಿಗೆ ಹಾಲೆರೆದು, ಗುದ್ದಲಿ ಪೂಜೆ ನೆರವೇರಿಸಿದರು.

LEAVE A REPLY

Please enter your comment!
Please enter your name here