








ನೆಲ್ಯಾಡಿ: ಕಡಬ ತಾಲೂಕು ಇಚ್ಲಂಪಾಡಿಯ ಉರೇಜಾಲ್ ನಿವಾಸಿ ಫಿಲಿಪ್ ಟಿ.ಎಮ್(52.ವ)ಎಂಬವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮನೆಯ ತೋಟದಲ್ಲಿ ಆ.28ರಂದು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ತೀವ್ರ ಅಸ್ವಸ್ಥಗೊಂಡ ಅವರನ್ನು ತಕ್ಷಣ ನೆಲ್ಯಾಡಿಯ ಅಶ್ವಿನಿ ಆಂಬುಲೆನ್ಸ್ ನಲ್ಲಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೆ.2ರಂದು ರಾತ್ರಿ 12.30ಕ್ಕೆ ನಿಧನ ಹೊಂದಿದರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರ,ಪುತ್ರಿಯನ್ನು ಅಗಲಿದ್ದಾರೆ.














