ನೆಲ್ಯಾಡಿ: ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ

0

  • ನ್ಯಾಯೋಚಿತ ತೀರ್ಪಿನಿಂದ ಪ್ರತಿಭಾವಂತ ಕ್ರೀಡಾಪಟು ಬೆಳೆಯಲು ಸಾಧ್ಯ: ಎಸ್.ಅಂಗಾರ

ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರ ಕಚೇರಿ ಮಂಗಳೂರು ದ.ಕ., ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು ಹಾಗೂ ಸರಕಾರಿ ಉನ್ನತ ಹಿ.ಪ್ರಾ.ಶಾಲೆ ನೆಲ್ಯಾಡಿ ಇದರ ಸಹಯೋಗದೊಂದಿಗೆ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ೨೦೨೨ನೇ ಸಾಲಿನ ವಾಲಿಬಾಲ್ ಪಂದ್ಯಾಟ ಸೆ.೩ರಂದು ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

 

ಕ್ರೀಡಾಕೂಟವನ್ನು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡೆಗಳಲ್ಲಿನ ತೀರ್ಪು ನ್ಯಾಯೋಚಿತವಾಗಿ ಇದ್ದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳು ಹೊರ ಹೊಮ್ಮಲಿದ್ದಾರೆ. ಇಲ್ಲದೇ ಇದ್ದಲ್ಲಿ ಉತ್ತಮ ಕ್ರೀಡಾಪಟು ಅವಕಾಶ ವಂಚಿತನಾಗಲಿದ್ದೇನೆ. ಈ ನಿಟ್ಟಿನಲ್ಲಿ ತೀರ್ಪುಗಾರರು ತೀರ್ಪು ಉತ್ತಮ ರೀತಿಯಲ್ಲಿ ಇರಬೇಕೆಂದು ಹೇಳಿದರು. ದ.ಕ.ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಕಾಂಚನ ಎಲೈಟ್ ರಬ್ಬರ್ ಕಂಪನಿ ಮಾಲಕ ಶಾಜಿ ಯು.ವಿ., ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಮೀನುಗಾರಿಕಾ ನಿಮಗದ ಅಧ್ಯಕ್ಷ ತೀರ್ಥರಾಮ, ನೆಲ್ಯಾಡಿ ಸುಬ್ರಹ್ಮಣ್ಯ ವಿಲಾಸ ಹೋಟೆಲ್‌ನ ಮಾಲಕ ಸುಬ್ರಹ್ಮಣ್ಯ ಆಚಾರ್ಯ, ನೆಲ್ಯಾಡಿ ಎನ್.ಎಸ್.ಕಾಂಪ್ಲೆಕ್ಸ್ ಮಾಲಕ ಎನ್.ಎಸ್.ಸುಲೈಮಾನ್, ಜಿ.ಪಂ.ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಪುತ್ತೂರು ತಾಲೂಕು ಭೂ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಭಾಸ್ಕರ ಎಸ್.ಗೌಡ, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್, ದ.ಕ.ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷ ಮಾಮಚ್ಚನ್, ಕಡಬ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀನ್ ವೇಗಸ್, ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್, ಎಸ್‌ಡಿಎಂಸಿ ಅಧ್ಯಕ್ಷ ಬಿನೋಜ್ ವಿ.ವಿ., ವಾಲಿಬಾಲ್ ಪಂದ್ಯಾಟದ ಆಯೋಜನಾ ಸಮಿತಿ ಕೋಶಾಧಿಕಾರಿ ಕೆ.ಪಿ.ಅಬ್ರಹಾಂ, ಪೂರ್ವವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಪೂರ್ವ ವಿದ್ಯಾರ್ಥಿಗಳಾಗಿದ್ದು ರಾಷ್ಟ್ರೀಯ ಕ್ರೀಡಾಪಟುಗಳಾದ ಯೇಸುದಾಸ್ ಪಿ.ಟಿ., ಪ್ರಮೋದ್‌ಕುಮಾರ್ ಶೆಟ್ಟಿ, ಮನೋಜ್ ಕೆ.ಜೆ., ಹರ್ಷಿತಾ ಶೆಟ್ಟಿ, ರಶ್ಮಿ ಆರ್., ಡಾ.ರಾಮಚಂದ್ರ ಗೌಡ, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಮೋನಪ್ಪ ಪಟ್ಟೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಜೆ.ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಲಿಬಾಲ್ ಪಂದ್ಯಾಟದ ಆಯೋಜನಾ ಸಮಿತಿ ಅಧ್ಯಕ್ಷ ನ್ಯಾಯವಾದಿ, ನೋಟರಿ ಇಸ್ಮಾಯಿಲ್ ನೆಲ್ಯಾಡಿ ಸ್ವಾಗತಿಸಿ, ಮುಖ್ಯಶಿಕ್ಷಕ ಆನಂದ ಅಜಿಲ ವಂದಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿಯೂ ಆಗಿರುವ ನೆಲ್ಯಾಡಿ ಶಾಲಾ ಶಿಕ್ಷಕ ವಿಮಲ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

30 ಲಕ್ಷ ರೂ.,ಅನುದಾನ:
ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಗೆ ಕೊಠಡಿ ನಿರ್ಮಾಣಕ್ಕೆ ೩೦ ಲಕ್ಷ ರೂ.ಅನುದಾನ ಮಂಜೂರುಗೊಳಿಸುವುದಾಗಿ ಸಚಿವ ಎಸ್.ಅಂಗಾರ ಹೇಳಿದರು. ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಸರಕಾರ ಬದ್ಧವಾಗಿದೆ. ನೆಲ್ಯಾಡಿ ಉನ್ನತ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ೪೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದಕ್ಕೆ ಸಚಿವ ಎಸ್.ಅಂಗಾರ ಸಂತಸ ವ್ಯಕ್ತಪಡಿಸಿದರು.

ಸನ್ಮಾನ:
ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲಾ ದೈಹಿಕ ಶಿಕ್ಷಣ ಜನಾರ್ದನ ಟಿ.,ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಸಂಸ್ಥೆಯ ಪೂರ್ವವಿದ್ಯಾರ್ಥಿಗಳಾಗಿದ್ದು ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಪಂದ್ಯಾಟಕ್ಕೆ ನಾನಾ ರೀತಿಯಲ್ಲಿ ಸಹಕಾರ ನೀಡಿದ ದಾನಿಗಳಿಗೆ ಶಾಲು ಹಾಕಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here