ದೇಶ ಭಕ್ತಿಯನ್ನು ಉದ್ದೀಪನಗೊಳಿಸುವ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭವದ ಶೋಭಾಯಾತ್ರೆಗೆ ಚಾಲನೆ

0

 

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಾಲ್ಕು ದಿನಗಳ ಕಾಲ ಪೂಜಿಸಲ್ಪಟ್ಟ 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶ್ರೀ ಗಣೇಶ ವಿಗ್ರಹದ ವೈಭವದ ಶೋಭಾಯಾತ್ರೆಗೆ ಸೆ.3ರಂದು ಸಂಜೆ ಚಾಲನೆ ನೀಡಲಾಯಿತು.

ಸಭಾ ವೇದಿಕೆ ಬಳಿ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್, ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್‍ಯದರ್ಶಿ ಚಂದ್ರಶೇಖರ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ತೆಂಗಿನ ಕಾಯಿ ಒಡೆಯುವ ಮೂಲಕ ಶ್ರೀ ಗಣೇಶನ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ಸುರೇಶ್ ಪುತ್ತೂರಾಯ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here