ತೈಕೊಂಡೊ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತಲಪಾಡಿಯ ಶಾರದಾ ವಿದ್ಯಾನಿಕೇತನ ಸಂಸ್ಥೆಯಲ್ಲಿ  ಜಿಲ್ಲಾ ಮಟ್ಟದ ತೈಕೊಂಡೊ ಸ್ಫರ್ಧೆ ಆ.5ರಂದು ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದೆ.


ಬಾಲಕರ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿನಿಶ್ ಕುಮಾರ್, ಪ್ರೀತಂ ಎಸ್ ಎನ್ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಂದನ್ ಗೌಡ ಬಿ. ಎಸ್ ಭಾಗವಹಿಸಿದ್ದರು.
ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿದ್ಧಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here