ಶಟಲ್ ಬ್ಯಾಡ್ಮಿಂಟನ್‌ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆಆಯ್ಕೆ

0

ಪುತ್ತೂರು, ಸೆ 5: ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.

 
ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ, ವಿಜ್ಞಾನ ವಿಭಾಗದ ನೇಹಾಲ್ ಮತ್ತು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರೇಯಾ ಭಾಗವಹಿಸಿದ್ದರು.ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಎಂ, ಸುಮಂತ್ ಮತ್ತು ಪ್ರಥಮಪಿಯುಸಿ ವಿಜ್ಞಾನ ವಿಭಾಗದ ಯಶ್ವಿನ್ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್‌  ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here