ಪುತ್ತೂರು: ಜಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವಮುಂದಾಳು ಪ್ರವೀಣ್ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ 32 ಕಡೆಗಳಿಗೆ ದಾಳಿ ನಡೆಸಿದ್ದಾರೆ.
ಸುಮಾರು ನೂರಕ್ಕೂ ಅಧಿಕ ವಾಹನಗಳಲ್ಲಿ ತನಿಖಾ ದಳದ ಅಧಿಕಾರಿಗಳು ಗುಪ್ತವಾಗಿ ಆಗಮಿಸಿದ್ದು ವಿವಿದೆಡೆ ಶಂಕಿತರಿಗೆ ಬಲೆ ಬೀಸಿದ್ದಾರೆ. ಈಗಾಗಲೇ ಪ್ರವೀಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹತ್ತು ಮಂದಿಯನ್ನು ಬಂಧಿಸಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆ ನಡೆಸುತ್ತಿದ್ದ ತನಿಖೆಯನ್ನು ಇದೀಗ ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದೆ.
ಇದೀಗ ಕೊಲೆಗೆ ಸಹಕರಿಸಿದವರನ್ನು ಪುತ್ತೂರಿನ ದರ್ಬೆ ನಿರೀಕ್ಷಣಾ ಮಂದಿರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪ್ರವೇಶಿಸಲು ಮಾಧ್ಯಮದವರನ್ನು ನಿರ್ಬಂಧಿಸಲಾಗಿದೆ.
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಉಪ್ಪಿನಂಗಡಿ, ಕಬಕ ಪರಿಸರದಲ್ಲಿ ಎನ್. ಐ. ಎ. ದಾಳಿ!