ಇಂದ್ರಪ್ರಸ್ಥ ವಿದ್ಯಾಲಯದಲ್ಲಿ Pre – KG ತರಗತಿ ಆರಂಭ

0

ಉಪ್ಪಿನಂಗಡಿ : ಮನೆಯಂಗಳದಲ್ಲಿ ಆಟವಾಡಿಕೊಂಡಿರುವ ಪುಟಾಣಿ ಮಕ್ಕಳನ್ನು ಶಾಲಾ ವಾತಾವರಣಕ್ಕೆ ಹೊಂದಿಕೊಳ್ಳುವಂತೆ ಮಾಡುವ ಸದುದ್ದೇಶದಿಂದ ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ Pre – KG ತರಗತಿಯು ಸೆ. 1 ರಂದು ಆರಂಭಗೊಂಡಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ನಿರ್ದೇಶಕಿ ಡಾ. ಸುಧಾ ರಾವ್ ತರಗತಿಯನ್ನು ಉದ್ಘಾಟಿಸಿ ಮಾತನಾಡಿ ಬಾಲ್ಯದಿಂದಲೇ ಸಂಸ್ಕಾರಯುತ ಜೀವನವನ್ನು ನಡೆಸುವಲ್ಲಿ ಈ ತರಗತಿಯು ಮಕ್ಕಳಿಗೆ ಅನುಕೂಲಕರವಾದದ್ದು ಎಂದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಪ್ರಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಮಧುಶ್ರೀ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here