ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಪೆ ಮಜಲು ಇಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಪ್ರಗತಿಪರ ಕೃಷಿಕ ವಾಸು ಪೂಜಾರಿ ಗುಂಡ್ಯಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶಿಕ್ಷಣ ಸಂಯೋಜಕ ಅಮೃತ ಕಲಾ ರವರು ಸಂದರ್ಭೋಚಿತವಾಗಿ ಮಾತನಾಡಿದರು.
ಸರಕಾರಿ ಪ್ರೌಢಶಾಲೆ ಪಾಪೆ ಮಜಲು ಇಲ್ಲಿಯ ಕಾರ್ಯಾಧ್ಯಕ್ಷ ತಿಲಕ್ ರೈ ಕುತ್ಯಾಡಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ವಿನೀತ, ಮೀನಾಕ್ಷಿ, ನಿವೃತ್ತ ರೇಂಜರ್ ಸುಬ್ರಹ್ಮಣ್ಯ ಗೌಡ ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಕುಮಾರ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಿ ಆರ್ ಪಿ ಕೆ ವಿ ಎಲ್ ಎನ್ ಪ್ರಸಾದ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯಗುರು ತೆರೇಸಾ ಎಂ ಸಿಕ್ವೇರಾ ಸ್ವಾಗತಿಸಿದರು. ಮೇಬಲ್ ಡಿಸೋಜಾ ವಂದಿಸಿದರು. ಶಿಕ್ಷಕಿ ಪುಷ್ಪಾವತಿ ಎಸ್ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿಯರಾದ ಜಯಲತಾ. ಬಿ. ಕೆ., ರಜನಿ ಕೆ ಆರ್, ಉಮಾ ನಾಯ್ಕ್, ಅತಿಥಿ ಶಿಕ್ಷಕಿ ಸೌಮ್ಯ, ಎಸ್ ಡಿ ಎಂ ಸಿ ಸದಸ್ಯರು ಮತ್ತುಪೋಷಕರು ಸಹಕರಿಸಿದರು.ಕಾವು ಕ್ಲಸ್ಟರ್ ನ ಮುಖ್ಯ ಗುರುಗಳು ಮತ್ತು ಶಿಕ್ಷಕರು ಮತ್ತು ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿದ್ದರು.