ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದ ಪದಾಧಿಕಾರಿಗಳಿಂದ ಶ್ರೀ ರಾಘವೇಶ್ವರ ಭಾರತೀ  ಮಹಾಸ್ವಾಮಿರವರ ಭೇಟಿ

0

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಾಲಯದಲ್ಲಿ 2023ರ ಜನವರಿ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕಲಶದ ಅಂಗವಾಗಿ ಕ್ಷೇತ್ರದ ವತಿಯಿಂದ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ  ಮಹಾಸ್ವಾಮಿರವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿಯ ಕುರಿತಾಗಿ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಕೋಲ್ಪೆ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಕೆ.ಎಸ್. ಮುಕ್ಕುಡ, ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರಾದ ಗೋಪಾಲಕೃಷ್ಣ ಭಟ್ ಬೈಪದವು ಹಾಗೂ ಕಿರಣ್ ಬೈಪದವು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here