ಈಶ್ವರಮಂಗಲದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಅಮಾನವೀಯ ಕೃತ್ಯ : ಪ್ರಯಾಣಿಕನಿಗೆ ಕಾಲಿನಿಂದ ತುಳಿದು ರಸ್ತೆಗೆ ತಳ್ಳಿದ ವೀಡಿಯೋ ವೈರಲ್

0

 

ಪುತ್ತೂರು: ಕೆಎಸ್‌ಆರ್ಟಿಸಿ ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಕೃತ್ಯ ಈಶ್ವರಮಂಗಲದಲ್ಲಿ ನಡೆದಿರುವುದಾಗಿ ವಿಡಿಯೋ ವೈರಲ್ ಅಗಿದೆ.
ಈಶ್ವರಮಂಗಲ ಪೇಟೆಯ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಕೆಎ 21 ಎಫ್ 0002 ನಂಬರ್‌ನ ಬಸ್ ನಿರ್ವಾಹಕ ಪ್ರಯಾಣಿಕನಿಗೆ ಕಾಲಿನಿಂದ ತುಳಿದು ಹೊರಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇಲ್ನೋಟಕ್ಕೆ ಪ್ರಯಾಣಿಕ ಪಾನಮತ್ತನಂತೆ ಕಂಡು ಬರುತ್ತಿದ್ದು ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆ ಎಸೆಯುತ್ತಾರೆ. ಬಸ್ಸಿನಿಂದ ಕೆಳಗಿಳಿಸಲು ನಿರ್ವಾಹಕ ಪ್ರಯಾಣಿಕನಿಗೆ ಕೈಯಿಂದ ಹಲ್ಲೆ ನಡೆಸುವುದಲ್ಲದೆ ಕೊನೆಗೆ ಕಾಲಿನಿಂದ ಪ್ರಯಾಣಿಕನ ಎದೆಗೆ ತುಳಿದು ರಸ್ತೆಗೆ ದೂಡಿ ಹಾಕಿ, ಆತನಿಗೆ ಜೋರು ಮಾಡುತ್ತಾರೆ. ರಸ್ತೆಗೆ ಬಿದ್ದ ಪ್ರಯಾಣಿಕನನ್ನು ಅಲ್ಲಿಯೇ ಬಿಟ್ಟು ನೇರವಾಗಿ ಬಸ್ ಚಲಾಯಿಸಿಕೊಂಡು ಹೋಗುವ ವಿಡಿಯೋ ವೈರಲ್ ಅಗುತ್ತಿದೆ.
ಕೂಡಲೇ ನಿರ್ವಾಹಕನ ಅಮಾನತು: ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಅಽಕಾರ ನಿರ್ವಾಹಕರಿಗಿಲ್ಲ. ಮೇಲ್ನೋಟಕ್ಕೆ, ನಿರ್ವಾಹಕ ಮಾಡಿರುವ ಕೃತ್ಯ ತಪ್ಪು ಎಂದು ಕಾಣುತ್ತಿದೆ. ಹೀಗಾಗಿ ನಿರ್ವಾಹಕನ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಆತನನ್ನು ಕೂಡಲೇ ಅಮಾನತು ಮಾಡಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಽಕಾರಿ ಜಯಕರ ಶೆಟ್ಟಿ ಸುದ್ದಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here