ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಗಿದೆ. ಕನ್ನಡ ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಯನ್ನು ಸಂರಕ್ಷಿಸುವ ಹೊಣೆ ಹೊತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಕುರಿತು ಆಕ್ಷೇಪ ಸಲ್ಲಿಸಿರುತ್ತದೆ. ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು, ವೇದಿಕೆಯ ಪರದೆ, ಫಲಕಗಳಲ್ಲಿ ಕನ್ನಡ ಪ್ರದರ್ಶಿಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮ ಆದೇಶಿಸಿದ್ದಾರೆ.